ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯೇಂದ್ರ ಮತ್ತು ಅವರಪ್ಪನನ್ನೇ ಬೈತಿದ್ದ ಯತ್ನಾಳ್‌ಗೆ ಈಗ ಜವಾಬ್ದಾರಿ ಕೊಟ್ಟಿದ್ದಾರೆ - ಸಿದ್ದರಾಮಯ್ಯ ವ್ಯಂಗ್ಯ

ಬಾಗಲಕೋಟೆ: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಗ್ಯುದ್ಧ ಮುಂದುವರಿದಿದೆ. ಬಾಗಲಕೋಟೆಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಬಿ.ವೈ.ವಿಜಯೇಂದ್ರ ವಿರುದ್ಧ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಹೈಕಮಾಂಡ್ ನಡೆಗೆ ಆಶ್ಚರ್ಯ ವ್ಯಕ್ತಪಡಿಸಿದ ಸಿದ್ದರಾಮಯ್ಯ, "ಹಿಂದೆ ಇದೇ ಯತ್ನಾಳ್ ಅವರು ವಿಜಯೇಂದ್ರ ಮತ್ತು ಅವರ ತಂದೆ ಬಿ.ಎಸ್. ಯಡಿಯೂರಪ್ಪ ಅವರನ್ನು ಏಕವಚನದಲ್ಲಿ ಬೈಯುತ್ತಿದ್ದರು. ಅಂತಹ ವ್ಯಕ್ತಿಯನ್ನೇ ಈಗ ಬಿಜೆಪಿ ಪ್ರಮುಖ ಜವಾಬ್ದಾರಿಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಲೇವಡಿ ಮಾಡಿದರು. ಯತ್ನಾಳ್ ಮೊದಲು ಯಾರ ಬಗ್ಗೆ ಏನೇನು ಮಾತನಾಡುತ್ತಿದ್ದರು ಎಂಬುದು ಎಲ್ಲರಿಗೂ ತಿಳಿದಿದೆ. ಈಗ ಅವರನ್ನೇ ಪಕ್ಕದಲ್ಲಿ ಕೂರಿಸಿಕೊಂಡು ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದು ಸಿಎಂ ಟೀಕಿಸಿದರು.

ಬಾಗಲಕೋಟೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರ ವೇಳೆ ಸಿಎಂ ಈ ಹೇಳಿಕೆ ನೀಡಿದ್ದಾರೆ. ಬಿಜೆಪಿ ಆಂತರಿಕ ಕಲಹ ಬಿಜೆಪಿಯಲ್ಲಿನ ಗುಂಪುಗಾರಿಕೆ ಮತ್ತು ನಾಯಕರ ನಡುವಿನ ಅಸಮಾಧಾನವನ್ನೇ ಅಸ್ತ್ರವಾಗಿಸಿಕೊಂಡ ಸಿದ್ದರಾಮಯ್ಯ, ಪ್ರತಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ಮೇಲೆ ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ, ಅವರಲ್ಲೇ ಮೊದಲು ಒಮ್ಮತವಿಲ್ಲ ಎಂದು ಸಿಎಂ ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿರುವ ಬಿಜೆಪಿಗೆ ಸಿದ್ದರಾಮಯ್ಯ ಖಡಕ್ ಉತ್ತರ ನೀಡಿದ್ದಾರೆ. ಜನರ ಅಭಿವೃದ್ಧಿಗಿಂತ ಹೆಚ್ಚಾಗಿ ಪರಸ್ಪರ ಬೈದಾಡಿಕೊಳ್ಳುವುದರಲ್ಲಿ ಕಾಲ ಕಳೆಯುವ ಬಿಜೆಪಿ ನಾಯಕರು ನಮ್ಮನ್ನು ಟೀಕಿಸುವ ಅಗತ್ಯವಿಲ್ಲ ಎಂದಿದ್ದಾರೆ.

Edited By : Vijay Kumar
PublicNext

PublicNext

04/04/2026 06:12 pm

Cinque Terre

5.35 K

Cinque Terre

0

ಸಂಬಂಧಿತ ಸುದ್ದಿ