ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಜೆಪಿಗರು ತಪ್ಪೊಪ್ಪಿಕೊಂಡು ಜನರ ಕ್ಷಮೆ ಕೇಳಲಿ - ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವದ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಕೇಳಿದಾಗ, ಆಟೋ ಚಾಲಕರಿಗೆ ಇದರಿಂದ ಬಹಳ ತೊಂದರೆಯಾಗುತ್ತಿದೆ. ಇದರಿಂದ ಸಂಚಾರ ವ್ಯವಸ್ಥೆಗೆ ಪರಿಣಾಮ ಬೀರುತ್ತಿದೆ. ಜತೆಗೆ ಹೋಟೆಲ್ ಕ್ಷೇತ್ರವು ಸಮಸ್ಯೆ ಎದುರಿಸುತ್ತಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದರು.

ಆಟೋ ಚಾಲಕರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿರುವ ಬಗ್ಗೆ ಕೇಳಿದಾಗ, ಅನಿಲ ಪೂರೈಕೆ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಲ್ಲ. ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕೇಂದ್ರ ಸರ್ಕಾರ ಸರಿಯಾಗಿ ಮುಂಜಾಗ್ರತೆ, ನೀತಿ ರೂಪಿಸಬೇಕಿತ್ತು. ಈ ವಿಚಾರದಲ್ಲಿ ವಿಫಲವಾಗಿದೆ. ಈ ವಿಚಾರವಾಗಿ ಬಿಜೆಪಿಯವರು ಈವರೆಗೂ ಯಾಕೆ ಮಾತನಾಡುತ್ತಿಲ್ಲ. ನಮ್ಮಿಂದ ತೊಂದರೆಯಾಗಿದೆ ಎಂದು ಒಪ್ಪಿಕೊಂಡು ಜನರ ಬಳಿ ಕ್ಷಮೆ ಕೋರಬೇಕು ಎಂದು ಶನಿವಾರ ಸದಾಶಿವನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಸಿಎಂ ದಾವಣಗೆರೆಯಲ್ಲಿ ಪ್ರಚಾರ ಮಾಡಲು ಹೇಳಿದ್ದು, ವೇಣುಗೋಪಾಲ್ ಅವರು ಕೇರಳದಲ್ಲಿ ಪ್ರಚಾರ ಮಾಡಲು ಹೇಳುತ್ತಿದ್ದಾರೆ ಎಂದು ಕೇಳಿದಾಗ, ನನಗೆ ಈ ವಿಚಾರವಾಗಿ ಗೊತ್ತಿಲ್ಲ. ಯಾರು ಇರಲಿ, ಇಲ್ಲದಿರಲಿ ನಮ್ಮ ಕರ್ತವ್ಯ ನಾವು ಮಾಡುತ್ತೇವೆ ಎಂದು ತಿಳಿಸಿದರು.

Edited By :
PublicNext

PublicNext

04/04/2026 06:13 pm

Cinque Terre

3.84 K

Cinque Terre

0

ಸಂಬಂಧಿತ ಸುದ್ದಿ