ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಎಫ್‍ಐಡಿ ಸಂಖ್ಯೆ ಕಡ್ಡಾಯ.!

ಚಿತ್ರದುರ್ಗ : 2026 - 27ನೇ ಸಾಲಿನ ಮುಂಗಾರು ಹಂಗಾಮಿನಿಂದ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ರೈತರ ಎಫ್‍ಐಡಿ ಸಂಖ್ಯೆ ಕಡ್ಡಾಯಗೊಳಿಸಲಾಗಿದೆ.ಕೃಷಿ ಇಲಾಖೆಯು ಅಭಿವೃದ್ಧಿಪಡಿಸಿರುವ ಹೊಸ ತಂತ್ರಾಂಶದ ಮೂಲಕ, ರೈತರ ಎಫ್‍ಐಡಿ ಸಂಖ್ಯೆಯನ್ನು ಬಳಸಿಕೊಂಡು ಅವರು ಹೊಂದಿರುವ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಎಷ್ಟು ಪ್ರಮಾಣದ ಯೂರಿಯಾ ಅಗತ್ಯವಿದೆಯೋ ಅಷ್ಟನ್ನು ಮಾತ್ರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆಸಂಪೂರ್ಣ ಪ್ರಕ್ರಿಯೆಯು 'ಕೆ-ಕಿಸಾನ್’ ತಂತ್ರಾಂಶದ ಮೂಲಕವೇ ನಡೆಯಲಿದೆ.

ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯುವುದು, ರೈತರು ಮಿತವ್ಯಯವಾಗಿ ಗೊಬ್ಬರ ಬಳಸುವಂತೆ ಮಾಡುವುದು ಹಾಗೂ ಮಾರಾಟದ ಮೇಲೆ ನಿಗಾ ಇರಿಸುವ ಉದ್ದೇಶದಿಂದ ಈ ಕ್ರಮ ಜಾರಿಗೆ ತರಲಾಗಿದೆ. ಇನ್ನೂ ಎಫ್‍ಐಡಿ ಹೊಂದಿಲ್ಲದ ರೈತರು ತಕ್ಷಣವೇ ತಮ್ಮ ಪಹಣಿ, ಬ್ಯಾಂಕ್ ಪಾಸ್‍ಬುಕ್ ಮತ್ತು ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ, ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಹೊಸದಾಗಿ ಎಫ್‍ಐಡಿ ಸೃಜಿಸಿಕೊಳ್ಳಬೇಕು. ಈಗಾಗಲೇ ಎಫ್‍ಐಡಿ ಹೊಂದಿರುವ ರೈತರು ತಮ್ಮ ಎಲ್ಲಾ ಸರ್ವೇ ನಂಬರ್‍ಗಳನ್ನು ಅದಕ್ಕೆ ಜೋಡಣೆ ಮಾಡಿಸಿಕೊಳ್ಳಲು ಅವಕಾಶವಿದೆ.

Edited By : PublicNext Desk
Kshetra Samachara

Kshetra Samachara

04/04/2026 06:33 pm

Cinque Terre

1.06 K

Cinque Terre

0

ಸಂಬಂಧಿತ ಸುದ್ದಿ