ಅರಸೀಕೆರೆ: ಕ್ಷೇತ್ರದ ಶಾಸಕ ಶಿವಲಿಂಗೇಗೌಡರ ಆಪ್ತ ಸಹಾಯಕನ ಪುತ್ರನೊಬ್ಬ ದಂಪತಿಯ ಮೇಲೆ ಭೀಕರ ಹಲ್ಲೆ ನಡೆಸಿರುವ ಘಟನೆ ಅರಸೀಕೆರೆಯಲ್ಲಿ ನಡೆದಿದೆ. ಶಾಸಕರ ಬಲಗೈ ಬಂಟನೆಂದೇ ಗುರುತಿಸಿಕೊಂಡಿರುವ ವ್ಯಕ್ತಿಯ ಮಗ ಹಲ್ಲೆ ನಡೆಸಿದ ಆರೋಪಿ ಎನ್ನಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಆರೋಪಿಯು ದಂಪತಿಯ ಮೇಲೆ ಮನಸ್ಸೋಯಿಚ್ಛೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯ ತೀವ್ರತೆಗೆ ದಂಪತಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾರ್ವಜನಿಕವಾಗಿ ರೌಡಿಸಂ ಪ್ರದರ್ಶಿಸಿರುವ ಆರೋಪಿಯ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ರಾಜಕೀಯ ಪ್ರಭಾವ ಬಳಸಿ ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯಬಾರದು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ
PublicNext
04/04/2026 08:30 pm
LOADING...