ಬೆಳಗಾವಿ: ದ್ವಿಚಕ್ರವಾಹನಗಳನ್ನು ಕದಿಯುತ್ತಿದ್ದ ಇಬ್ಬರು ಖದೀಮರನ್ನು ಬಂಧಿಸಿರುವ ಸಂಕೇಶ್ವರ ಪೊಲೀಸರು ಸುಮಾರು 18,30,000 ಮೌಲ್ಯದ 27 ಬೈಕ್ ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬೈಕ್ ಕಳ್ಳತನ ಪ್ರಕರಣದಲ್ಲಿ ಲಕ್ಷ್ಮಣ ವಿರುಪಾಕ್ಷಿ ಕಣಬರಗಿ (31), ಫಕಿರಪ್ಪ ಕರಿಗಾರ (25) ಬಂಧಿತ ಆರೋಪಿಗಳು ಈ ಆರೋಪಿಗಳು ಸಂಕೇಶ್ವರ ಪಟ್ಟಣದಲ್ಲಿ, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮತ್ತು ಬೆಳಗಾವಿ ಶಹರದ ವಿವಿಧ ಪೊಲೀಸ್ ಠಾಣೆ ಹಾಗೂ ಮಹಾರಾಷ್ಟ್ರದ ಚಂದಗಡ ಪೊಲೀಸ್ ಠಾಣೆಯ ವ್ಯಾಪ್ತಿಗಳಲ್ಲಿ ಕಳವು ಮಾಡಿದ ಒಟ್ಟು 26 ಬೈಕ್ ಹಾಗೂ ಕೃತ್ಯಕ್ಕೆ ಉಪಯೋಗಿಸಿದ 1 ಹೀಗೆ ಒಟ್ಟು.18.30 ಲಕ್ಷ ಮೌಲ್ಯದ 27 ಬೈಕ್ ಗಳನ್ನು ಜಪ್ತ ಮಾಡಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.
Kshetra Samachara
04/04/2026 09:35 pm
LOADING...