ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಲವ್ ಜಿಹಾದ್ ಪ್ರಕರಣ; ಸಮೀರ್ ಮೇಲೆ ಹಲ್ಲೆ, ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ಹುಬ್ಬಳ್ಳಿ: ನಗರದಲ್ಲಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಮೀರ್ ಎಂಬ ಯುವಕನ ಮೇಲೆ ನಡೆದ ಹಲ್ಲೆಯ ದೃಶ್ಯಗಳು ಪಬ್ಲಿಕ್ ನೆಕ್ಸ್ಟ್ ಗೆ ಲಭ್ಯವಾಗಿದೆ.

ಹೌದು.. ಶುಕ್ರವಾರ ಬೆಳಿಗ್ಗೆ ವಿಜಯನಗರದಲ್ಲಿರುವ ಸಮೀರ್ ನಿವಾಸಕ್ಕೆ ನುಗ್ಗಿದ ಸುಮಾರು 60–70 ಹಿಂದೂ ಕಾರ್ಯಕರ್ತರ ಗುಂಪು, ಸಮೀರ್ ನನ್ನು ಮನೆ ಹೊರಗೆ ಕರೆತರುತ್ತಿದ್ದಾಗಲೇ ಹಲ್ಲೆ ನಡೆಸಲಾಗಿದ್ದು, ಎಲ್ಲರೂ ಸೇರಿ ಹಿಗ್ಗಾಮುಗ್ಗಾ ಥಳಿಸುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಕಂಡುಬಂದಿದೆ.

ಹಲ್ಲೆಗೊಳಗಾದ ಸಮೀರ್ ಗಂಭೀರವಾಗಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಮೀರ್ ನಿವಾಸದ ಬಳಿ ಅಳವಡಿಸಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

-ಸಂತೋಷ್, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

04/04/2026 10:14 pm

Cinque Terre

31.54 K

Cinque Terre

10

ಸಂಬಂಧಿತ ಸುದ್ದಿ