ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವೃದ್ಧೆ ಸಾವು

ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚಮಹಲ್ ಬಳಿ ವೃದ್ಧೆಯೊಬ್ಬರು ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ.

ಮೃತ ವೃದ್ಧೆಯನ್ನು ಬಾದಾಮಿ ಮೂಲದ ಮುಲ್ಕಿಯಲ್ಲಿ ವಾಸ್ತವ್ಯವಿರುವ ಫಕೀರವ್ವ (90)ಎಂದು ಗುರುತಿಸಲಾಗಿದೆ.

ಫಕೀರವ್ವ ಕಳೆದ ಹಲವಾರು ವರ್ಷಗಳಿಂದ ಮುಲ್ಕಿಯಲ್ಲಿ ನೆಲೆಸಿದ್ದು, ರಾತ್ರಿ ಹೊತ್ತು ಪಂಚಮಹಲ್ ರಸ್ತೆಯ ಬಳಿ ನಡೆದುಕೊಂಡು ಹೋಗುತ್ತಿರುವಾಗ ಕಟ್ಟಡ ಒಂದರ ಎದುರು ಬದಿಯಲ್ಲಿ ಕಾಮಗಾರಿ ನಡೆಯುತ್ತಿದ್ದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಮಾಜಿ ನಪಂ ಸದಸ್ಯ ಹರ್ಷ ರಾಜ ಶೆಟ್ಟಿ ಹಾಗೂ ಮುಲ್ಕಿ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಬಳಿಕ ಅಗ್ನಿಶಾಮಕ ದಳ ಆಗಮಿಸಿ ಮೃತದೇಹವನ್ನು ಬಾವಿಯಿಂದ ತೆರವುಗೊಳಿಸಿದ್ದಾರೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಹಲವಾರು ವರ್ಷಗಳಿಂದ ಈ ಪರಿಸರದಲ್ಲಿ ಕಟ್ಟಡದ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಸ್ಥಳೀಯರಿಗೆ ತಲೆನೋವಾಗಿ ಪರಿಣಮಿಸಿದೆ. ಪ್ರತಿ ಮಳೆಗಾಲದಲ್ಲಿ ಕಟ್ಟಡದ ಕೆಳಭಾಗದಲ್ಲಿ ಮಳೆನೀರು ನಿಲ್ಲುತ್ತಿದ್ದು , ಸ್ಥಳೀಯರು ಮುಲ್ಕಿ ನಗರ ಪಂಚಾಯಿತಿಗೆ ದೂರು ನೀಡಿ ಕಟ್ಟಡದ ಮಾಲೀಕರನ್ನು ತರಾಟೆಗೆ ತೆಗೆದುಕೊಂಡಿದ್ದರು. ಅದೇ ರೀತಿ ಕಟ್ಟಡದ ಎದುರು ಭಾಗದಲ್ಲಿ ಯಾವುದೇ ಸುರಕ್ಷತೆ ಇಲ್ಲದೆ ಬಾವಿ ಕಾಮಗಾರಿ ನಡೆಯುತ್ತಿದ್ದು, ಮಹಿಳೆ ಆಕಸ್ಮಿಕವಾಗಿ ಬಾವಿಗೆ ಕಾಲು ಜಾರಿ ಬಿದ್ದು ಮೃತರಾಗಿರುವ ಬಗ್ಗೆ ಸ್ಥಳೀಯರಲ್ಲಿ ಸಂಶಯ ಉಂಟಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

Edited By : Manjunath H D
PublicNext

PublicNext

04/04/2026 10:20 pm

Cinque Terre

14.88 K

Cinque Terre

0

ಸಂಬಂಧಿತ ಸುದ್ದಿ