ಹುಬ್ಬಳ್ಳಿ: ಲವ್ ಜಿಹಾದ್ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು, ಸಂತ್ರಸ್ತೆ ಮನೆಗೆ ಭೇಟಿ ನೀಡಿ ಕುಟುಂಬಸ್ಥರ ಜೊತೆಗೆ ಮಾತನಾಡಿದ್ದಾರೆ.
ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಜಿಮ್‍ಗೆ ಬರುತ್ತಿದ್ದ ಹಿಂದೂ ಹುಡುಗಿಯರನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಸಮೀರ್ ಮುಲ್ಲಾ ಪ್ರಕರಣದಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಜರುಗಿಸಬೇಕು. ಅಲ್ಲದೇ ಇದು ಮುಂದಿನ ದಿನಗಳಲ್ಲಿ ಇಂತಹ ಕೃತ್ಯ ಎಸಗುವವರಿಗೆ ಪಾಠವಾಗಬೇಕು. ಇಲ್ಲವಾದರೆ ಹುಬ್ಬಳ್ಳಿ ಬಂದ್ ಎಚ್ಚರಿಕೆ ನೀಡಿದರು.
ಹುಬ್ಬಳ್ಳಿ ಜಿಮ್ ಟ್ರೇನರ್ ಸಮೀರ್ ಮುಲ್ಲಾನ ಲವ್ ಜಿಹಾದ್ ಪ್ರಕರಣ ಹಿಂದೂ ಸಮುದಾಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಏಳರಿಂದ ಎಂಟು ಹಿಂದೂ ಹುಡುಗಿಯರನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಗರ್ಭಪಾತ ಮಾತ್ರೆ ನೀಡುತ್ತಿದ್ದ ಆರೋಪಿ ಸಮೀರ್ ಮುಲ್ಲಾ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಹಾಗೂ ನ್ಯಾಯಾಲಯ ತಕ್ಕ ಶಿಕ್ಷೆ ನೀಡುವ ಕಾರ್ಯ ಮಾಡಬೇಕಿದೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
04/04/2026 10:58 pm
LOADING...