ಬೆಳಗಾವಿ: ರಾತ್ರಿ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಕಳವು ಮಾಡಿದ್ದ ಪ್ರಕರಣವನ್ನು ಬೆಳಗಾವಿ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ, ಕದ್ದ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಗೋಕಾಕ ತಾಲೂಕಿನ ಸಿದ್ದಲಿಂಗಪ್ಪ ಸಣ್ಣಭೀಮಪ್ಪ ತಪಸಿ ಎಂಬುವರ ಮನೆಯಲ್ಲಿ 6,90,000 ರೂಪಾಯಿ ನಗದು ಕಳ್ಳತನವಾಗಿತ್ತು. ಈ ಸಂಬಂಧ ಅವರು ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಗೋಕಾಕ ಗ್ರಾಮೀಣ ಠಾಣೆಯ ಪೊಲೀಸರು, ಬಸವರಾಜ ರಾಮಣ್ಣ ಬಡಿಗೇರ (42) ಎಂಬ ಆರೋಪಿಯನ್ನು ಬಂಧಿಸಿ, ಕಳ್ಳತನವಾಗಿದ್ದ 6,90,000 ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳುವ ಮೂಲಕ ಪ್ರಕರಣವನ್ನು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ.
PublicNext
04/04/2026 10:59 pm
LOADING...