ಶಿವಮೊಗ್ಗ : ಹೊಸನಗರ ತಾಲೂಕಿನ ಗುಬ್ಬಿಗ ಗ್ರಾಮದ ಕಲ್ಲುಹಳ್ಳ ಪ್ರದೇಶದಲ್ಲಿ ಒಂಟಿ ಕಾಡಾನೆ ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಆನೆಯನ್ನು ಅರಣ್ಯ ಪ್ರದೇಶದತ್ತ ಓಡಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ.
ಸಾರ್ವಜನಿಕರಿಗೆ ಹಾಗೂ ತೋಟ-ಬೆಳೆಗಳಿಗೆ ಯಾವುದೇ ಹಾನಿ ಆಗದಂತೆ ಕ್ರಮ ಕೈಗೊಳ್ಳುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಅರಣ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಅರಣ್ಯ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಆನೆ ಕಂಡುಬಂದ ಪ್ರದೇಶಗಳಿಗೆ ಅನಾವಶ್ಯಕವಾಗಿ ತೆರಳದೇ ಎಚ್ಚರಿಕೆಯಿಂದ ಇರಲು ಮನವಿ ಮಾಡಿದೆ.
Kshetra Samachara
05/04/2026 09:21 am
LOADING...