ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಇಂದು ನಡೆಯಲಿರುವ ಬಹುನಿರೀಕ್ಷಿತ ಐಪಿಎಲ್ ಪಂದ್ಯದ ಟಿಕೆಟ್‌ಗಳ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸುವ ಪ್ರಯತ್ನ ನಡೆಯುತ್ತಿದೆ.
ಸಾಮಾಜಿಕ ಜಾಲತಾಣಗಳಲ್ಲಿ, ವಿಶೇಷವಾಗಿ ಫೇಸ್‌ಬುಕ್‌ನಲ್ಲಿ 'ಐಪಿಎಲ್ ಧಮಾಕಾ ಸೇಲ್' ಎಂಬ ಹೆಸರಿನಲ್ಲಿ ನಕಲಿ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್‌ಗಳಲ್ಲಿ, ಐಪಿಎಲ್ ಟಿಕೆಟ್‌ಗಳು ಲಭ್ಯವಿದ್ದು, ಆಸಕ್ತರು ನಿರ್ದಿಷ್ಟ ಲಿಂಕ್ ಅನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
ಸಾರ್ವಜನಿಕರನ್ನು ವಂಚಿಸುವ ಉದ್ದೇಶದಿಂದಲೇ ಈ ಕೃತ್ಯವನ್ನು ಎಸಗಲಾಗುತ್ತಿದೆ. ಟಿಕೆಟ್‌ಗಳು ಲಭ್ಯವಿದೆ ಎಂದು ಸುಳ್ಳು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸಲು ಯತ್ನಿಸಲಾಗುತ್ತಿದೆ. ಈ ನಕಲಿ ಟಿಕೆಟ್ ಮಾರಾಟದ ಪೋಸ್ಟ್‌ಗಳನ್ನು ಗಮನಿಸಿದ ಹುಳಿಮಾವು ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾರ್ವಜನಿಕರು ಇಂತಹ ನಕಲಿ ಪೋಸ್ಟ್‌ಗಳ ಬಗ್ಗೆ ಎಚ್ಚರದಿಂದ ಇರುವಂತೆ ಪೊಲೀಸರು ಮನವಿ ಮಾಡಿದ್ದಾರೆ.
PublicNext
05/04/2026 10:48 am