ನೆಲಮಂಗಲ: ತಡರಾತ್ರಿ ಚಲಿಸುತ್ತಿದ್ದ ರೈಲಿನಿಂದ ಹಾರಿ ಬಿದ್ದ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ನೆಲಮಂಗಲ ತಾಲ್ಲೂಕಿನ ರಾಯರಪಾಳ್ಯ ಬಳಿ ಸಂಭವಿಸಿದೆ.ಸುಮಾರು 23 ವರ್ಷದ ಅಪರಿಚಿತ ಯುವಕ ಮೃತಪಟ್ಟಿದ್ದು, ಆತ ಉತ್ತರ ಭಾರತ ಮೂಲದವನಾಗಿದ್ದು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಎಂದು ಶಂಕಿಸಲಾಗಿದೆ.ಮೃತದೇಹವನ್ನು ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.ಘಟನಾ ಸ್ಥಳಕ್ಕೆ ದಾಬಸ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
05/04/2026 10:52 am
LOADING...