ಚಿಕ್ಕಮಗಳೂರು: ಬಾಗಲಕೋಟೆ ಉಪಚುನಾವಣೆಯ ಅಖಾಡ ದಿನೇ ದಿನೇ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ಶ್ರೀ ವೀರಣ್ಣ ಚರಂತಿಮಠ ಅವರ ಗೆಲುವಿಗಾಗಿ ಪಕ್ಷದ ಪ್ರಮುಖ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಬೇವಿನಾಳ, ಇನಾಮಬೂದಿಹಾಳ, ಹಿರೇಮಾಗಿ ಹಾಗೂ ಮಾದಾಪೂರ ಗ್ರಾಮಗಳಲ್ಲಿ ಮಿಂಚಿನ ಸಂಚಾರ ನಡೆಸಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಸಾಥ್ ನೀಡುವ ಮೂಲಕ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಿದರು. ಶಾಸಕ ಸುನಿಲ್ ಕುಮಾರ್ ಕಾರ್ಕಳ ಮತ್ತು ಜಿಲ್ಲಾಧ್ಯಕ್ಷ ಶಾಂತನಗೌಡ ಪಾಟೀಲ್ ಸೇರಿದಂತೆ ಹಲವು ಪ್ರಮುಖ ಮುಖಂಡರು ಈ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಬಿಜೆಪಿಯ ಅಭಿವೃದ್ಧಿ ಕಾರ್ಯಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಟ್ಟರು. ಗ್ರಾಮದ ಪ್ರತಿಯೊಂದು ಬೀದಿಗಳಲ್ಲಿ ಸಂಚರಿಸಿದ ನಾಯಕರು ವೀರಣ್ಣ ಚರಂತಿಮಠ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
Kshetra Samachara
05/04/2026 01:13 pm
LOADING...