ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಡ್ರಿಂಕ್ ಅಂಡ್ ಡ್ರೈವ್ ಚೆಕ್ ಮಾಡಿದ್ದಕ್ಕೆ ಅದೇ ಲಾರಿಯಲ್ಲಿ ಚಾಲಕನ ಆತ್ಮಹತ್ಯೆ

ಬೆಂಗಳೂರು: ಟ್ರಾಫಿಕ್ ಪೊಲೀಸರು ಡ್ರಿಂಕ್ ಅಂಡ್ ಡ್ರೈವ್ ಚೆಕ್ ಮಾಡಿ ಲಾರಿ ಸೀಜ್ ಮಾಡಿದ್ದಕ್ಕೆ ಲಾರಿ ಚಾಲಕ ಅದೇ ಲಾರಿಯಲ್ಲಿ ನೇಣಿಗೆ ಶರಣಾಗಿದ್ದಾನೆ. ಮೃತ ಚಾಲಕನನ್ನು ಷಣ್ಮುಗ ಎಂದು ಗುರುತಿಸಲಾಗಿದೆ.

ನಿನ್ನೆ ಜೆಪಿ ನಗರ ಸಂಚಾರ ಪೊಲೀಸರು ಡಿಡಿ ಚೆಕ್ಕಿಂಗ್ ನಡೆಸುತ್ತಿದ್ದಾಗ ಷಣ್ಮುಗ ಚಲಾಯಿಸುತ್ತಿದ್ದ ಲಾರಿಯನ್ನು ತಡೆದಿದ್ದರು. ಡ್ರಿಂಕ್ ಅಂಡ್ ಡ್ರೈವ್ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ದಂಡ ವಿಧಿಸಿ, ಲಾರಿಯನ್ನು ಠಾಣೆ ಬಳಿ ಕರೆತಂದಿದ್ದಾರೆ.

ಪೊಲೀಸರ ಈ ಕ್ರಮದಿಂದ ಮನನೊಂದ ಷಣ್ಮುಗ, ಠಾಣೆ ಪಕ್ಕ ನಿಲ್ಲಿಸಿದ್ದ ಲಾರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Edited By : Abhishek Kamoji
Kshetra Samachara

Kshetra Samachara

05/04/2026 01:13 pm

Cinque Terre

200

Cinque Terre

0

ಸಂಬಂಧಿತ ಸುದ್ದಿ