ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪರೀಕ್ಷೆ ಫಲಿತಾಂಶ ಭಯಕ್ಕೆ SSLC ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರು ಉತ್ತರ ತಾಲ್ಲೂಕು ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ಮುನ್ನವೇ ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಅನು (16) ಎಂಬ ಬಾಲಕಿ ಹತ್ತನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣವಾಗುವ ಭಯದಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ನಿರ್ಧಾರ ಕೈಗೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಗೋವಿಂದರಾಜು–ಪುಷ್ಪಲತಾ ದಂಪತಿಗಳ ಪುತ್ರಿಯಾಗಿದ್ದ ಅನು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆ ವೇಳೆ ಪೋಷಕರು ಕೆಲಸಕ್ಕೆ ತೆರಳಿದ್ದು, ತಂದೆ ಕೆಲಸ ಮುಗಿಸಿ ಮನೆಗೆ ಮರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನಾಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪರೀಕ್ಷೆ ಫಲಿತಾಂಶದ ಬಗ್ಗೆ ಆತಂಕ, ಒತ್ತಡ ಅನುಭವಿಸುವ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರೊಂದಿಗೆ ಮುಕ್ತವಾಗಿ ಮಾತನಾಡುವುದು ಬಹಳ ಮುಖ್ಯ. ಅಗತ್ಯವಿದ್ದರೆ ಸಮಾಲೋಚನೆ ಪಡೆಯುವುದು ಉತ್ತಮ. ಇದು ನಮ್ಮ ಕಳಕಳಿ.

Edited By :
PublicNext

PublicNext

05/04/2026 02:45 pm

Cinque Terre

5.11 K

Cinque Terre

0