ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜನರ ವಿಶ್ವಾಸವೇ ನಮ್ಮ ಶಕ್ತಿ : ಬಿಜೆಪಿ ಗೆಲುವಿಗೆ ನಾಯಕರ ಒಗ್ಗಟ್ಟು : ಶಾಸಕ ಭೈರತಿ ಬಸವರಾಜ್ ವಿಶ್ವಾಸ

ಬೆಂಗಳೂರು: ಹೊಸಕೋಟೆಯ ತಾವರೆಕೆರೆ ಜಾತ್ರಾ ಮಹೋತ್ಸವದಲ್ಲಿ ಶಾಸಕ ಭೈರತಿ ಬಸವರಾಜ್ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಮೇಶ್ವರಸ್ವಾಮಿ ಮತ್ತು ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಸಂಕಲ್ಪ ಕೈಗೊಂಡಿರುವ ಅವರು, ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ಆಶಿಸಿದ್ದಾರೆ. ಈ ಕುರಿತು ಮಾತನಾಡಿದ ಬಸವರಾಜ್, "ಮುಂದಿನ ದಿನಗಳಲ್ಲಿ ಗೆಲುವಿಗಾಗಿ ಜನರ ಆಶೀರ್ವಾದವನ್ನು ಕೇಳುತ್ತಿದ್ದೇವೆ. ಜನರ ನ್ಯಾಯಾಲಯಕ್ಕೆ ಬಿಡುತ್ತೇವೆ, ಜನರೇ ತೀರ್ಮಾನ ಮಾಡುತ್ತಾರೆ," ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ನಡೆಯುತ್ತಿರುವ ಎರಡು ವಿಧಾನಸಭಾ ಕ್ಷೇತ್ರಗಳ ಚುನಾವಣೆಗಳ ಕುರಿತು ಮಾತನಾಡಿದ ಅವರು, "ಅಲ್ಲಿನ ಮತದಾರ ದೇವರುಗಳು ಉತ್ತಮ ತೀರ್ಮಾನ ಕೈಗೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ," ಎಂದರು.

ಈ ಹಿಂದೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ ಎಂದು ನೆನಪಿಸಿಕೊಂಡ ಬಸವರಾಜ್, ಜಾತ್ರಾ ಮಹೋತ್ಸವದ ಕಾರ್ಯಗಳಲ್ಲಿ ನಿರತರಾಗಿದ್ದ ಕಾರಣ ಚುನಾವಣಾ ಪ್ರಚಾರದಲ್ಲಿ ಹೆಚ್ಚು ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಎಲ್ಲಾ ವಿಧಾನಸಭಾ ಕ್ಷೇತ್ರಗಳ ಜನತೆಯ ವಿಶ್ವಾಸವೇ ತಮ್ಮ ಶಕ್ತಿ ಎಂದು ಪ್ರತಿಪಾದಿಸಿದರು.

ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವು ಜನರ ವಿಶ್ವಾಸ ಗಳಿಸುವ ಕೆಲಸ ಮಾಡಲಿದೆ ಎಂದು ಭರವಸೆ ನೀಡಿದ ಭೈರತಿ ಬಸವರಾಜ್, ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಪಕ್ಷದ ಎಲ್ಲಾ ಹಿರಿಯ ನಾಯಕರು ಒಗ್ಗೂಡಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಂಕಲ್ಪ ಮಾಡಿದ್ದಾರೆ ಎಂದು ಹೇಳಿದರು. ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾವು ಸಂಕಲ್ಪಬದ್ಧರಾಗಿದ್ದೇವೆ ಎಂದು ಪುನರುಚ್ಚರಿಸಿದರು.

ಸ್ಲಗ್: ರಾಜ್ಯದಲ್ಲಿ ಸದ್ದು ಮಾಡುತ್ತಿದೆ ಭೈರತಿ ಸಂಕಲ್ಪ!

Edited By : Manjunath H D
PublicNext

PublicNext

05/04/2026 05:07 pm

Cinque Terre

6.55 K

Cinque Terre

0