ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಗ್ಯಾಸ್ ಸಿಲಿಂಡರ್‌ಗಾಗಿ ಹೆದ್ದಾರಿ ತಡೆದು ಪ್ರತಿಭಟನೆ - ಸಾರ್ವಜನಿಕರ ಆಕ್ರೋಶ

ಶಿವಮೊಗ್ಗ : ಗೃಹ ಬಳಕೆಯ ಸಿಲಿಂಡರ್ ಪೂರೈಕೆಯಲ್ಲಿ ಕೊರತೆ ಉಂಟಾಗಿರುವುದನ್ನು ವಿರೋಧಿಸಿ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಸಮೀಪದ ಮೂಡಲ ವಿಠಲಾಪುರ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಮೂಡಲ ವಿಠಲಾಪುರದ ಬಸ್ ನಿಲ್ದಾಣದ ಬಳಿಯ ಗ್ಯಾಸ್ ಏಜೆನ್ಸಿ ಗೋಡೌನ್ ಎದುರು ನೂರಾರು ಖಾಲಿ ಸಿಲಿಂಡರ್‌ಗಳನ್ನು ಸಾಲಾಗಿ ಇಟ್ಟ ಗ್ರಾಮಸ್ಥರು ಅಲ್ಲಿಯೇ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದ ಶಿವಮೊಗ್ಗ-ಚಿತ್ರದುರ್ಗ ನಡುವೆ ವಾಹನ ಸಂಚಾರ ಸ್ಥಗಿತಗೊಂಡು ಗಂಟೆಗೂ ಹೆಚ್ಚು ಕಾಲ ವಾಹನಗಳು ರಸ್ತೆಯಲ್ಲಿಯೇ ಸಾಲುಗಟ್ಟಿದವು.

ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬರಬೇಕು. ನಮಗೆ ಸಿಲಿಂಡರ್ ಕೊಡಿಸಬೇಕು. ಅಲ್ಲಿಯವರೆಗೂ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದರು. ಸ್ಥಳಕ್ಕೆ ಬಂದ ಹೊಳೆಹೊನ್ನೂರು ಠಾಣೆ ಪೊಲೀಸರು, ಸಂಬಂಧಿಸಿದ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿ ಗ್ರಾಮಸ್ಥರ ಮನವೊಲಿಸಿ ರಸ್ತೆ ಸಂಚಾರ ಮುಕ್ತಗೊಳಿಸಿದರು.

Edited By :
PublicNext

PublicNext

05/04/2026 05:56 pm

Cinque Terre

9.49 K

Cinque Terre

0

ಸಂಬಂಧಿತ ಸುದ್ದಿ