ಎನ್.ಆರ್.ಪುರ: ಹೊನ್ನೇಕುಡಿ ಸಂಪರ್ಕ ಸೇತುವೆಯ ಉದ್ಘಾಟನೆಗೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಸಹಾಯಕ ಆಯುಕ್ತ ನಟೇಶ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಎಸಿ ನಟೇಶ್ ಅವರು, ಕಾರ್ಯಕ್ರಮದ ಯಶಸ್ಸಿಗಾಗಿ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಭೇಟಿಯ ಕಾರಣ ಯಾವುದೇ ಇಲಾಖೆಯ ಅಧಿಕಾರಿ ಅಥವಾ ಸಿಬ್ಬಂದಿ ರಜೆ ಹಾಕುವಂತಿಲ್ಲ ಮತ್ತು ಪ್ರತಿಯೊಬ್ಬರೂ ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಹಾಜರಿರಬೇಕು ಎಂದು ಆದೇಶಿಸಲಾಗಿದೆ. ವಿಐಪಿಗಳ ವಾಸ್ತವ್ಯಕ್ಕಾಗಿ ಪ್ರವಾಸಿ ಮಂದಿರ ಹಾಗೂ ಪಟ್ಟಣದ ಪ್ರಮುಖ ಲಾಡ್ಜ್‌ಗಳಲ್ಲಿ 18ಕ್ಕೂ ಹೆಚ್ಚು ಕೊಠಡಿಗಳನ್ನು ಈಗಾಗಲೇ ಕಾಯ್ದಿರಿಸಲಾಗಿದೆ. ಕಾರ್ಯಕ್ರಮದ ಸ್ಥಳದಲ್ಲಿ ಸ್ವಚ್ಛತೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತು ಕೈ ತೊಳೆಯಲು ಹೆಚ್ಚಿನ ನಳಗಳ ವ್ಯವಸ್ಥೆ ಮಾಡುವಂತೆ ಪುರಸಭೆ ಹಾಗೂ ಕುಡಿಯುವ ನೀರಿನ ವಿಭಾಗದ ಅಧಿಕಾರಿಗಳಿಗೆ ಸೂಚಿಸಲಾಯಿತು.
Kshetra Samachara
05/04/2026 06:38 pm
LOADING...