ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವಂತೆ ಶಾಸಕ ಶ್ರೀನಿವಾಸ ಮಾನೆ ಅವರಿಗೆ ಮನವಿ

ಹಾನಗಲ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ (ಕಿರಿಯ ಆರೋಗ್ಯ ಸಹಾಯಕಿಯರು) ವಿವಿಧ ನ್ಯಾಯಯುತ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವಂತೆ ಇಲ್ಲಿ ಸುರಕ್ಷಾಧಿಕಾರಿಗಳ ಸಂಘದ ಪದಾಧಿಕಾರಿಗಳು ಶಾಸಕ ಶ್ರೀನಿವಾಸ ಮಾನೆ ಅವರಿಗೆ ಮನವಿ ಸಲ್ಲಿಸಿದರು.

ವಿಳಂಬಕ್ಕೆ ಅವಕಾಶ ನೀಡದೇ ಪದೋನ್ನತಿ ನೀಡಬೇಕು, ಸಿ ಮತ್ತು ಆರ್ ನಿಯಮಗಳನ್ನು ತಿದ್ದುಪಡಿ ಮಾಡಬೇಕು, ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು, ಕೆಎಎಂಎಸ್ ಕ್ಷೇತ್ರ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಪ್ರತಿಯೊಂದು ಕ್ಷೇತ್ರ, ಪ್ರಭಾರ ಕ್ಷೇತ್ರಗಳನ್ನು ಒಳಗೊಂಡಂತೆ ಮ್ಯಾಪಿಂಗ್ ಮಾಡಲು ಅವಕಾಶ ನೀಡಬೇಕು, ತರಬೇತಿ ಕೇಂದ್ರಗಳನ್ನು ಪುನರ್ ಸ್ಥಾಪಿಸಬೇಕು, ಟ್ಯಾಬ್‌ಗಳನ್ನು ವಿತರಿಸಬೇಕು, ಜನಸಂಖ್ಯೆಗೆ ಅನುಗುಣವಾಗಿ ಉಪ ಕೇಂದ್ರಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು, ಸೇವಾನಿರತರಿಗೆ ನರ್ಸಿಂಗ್ ಆಫೀಸರ್ ತರಬೇತಿಗೆ ಎನ್‌ಒಸಿ ನೀಡಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಅವಕಾಶ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮನವಿ ಸ್ವೀಕರಿಸಿದ ಶಾಸಕ ಮಾನೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರ ಗಮನ ಸೆಳೆಯುವ ಭರವಸೆ ನೀಡಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ಜಿಲ್ಲೆ ಮತ್ತು ತಾಲೂಕಾ ಘಟಕದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

ವರದಿ : ಲೋಕೇಶ್ ಸುಣಗಾರ್ ಪಬ್ಲಿಕ್ ನೆಕ್ಸ್ಟ್ ಹಾನಗಲ್

Edited By : Nagaraj Tulugeri
PublicNext

PublicNext

05/04/2026 06:57 pm

Cinque Terre

5.05 K

Cinque Terre

0