ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಬೆಣ್ಣೆನಗರಿಯಲ್ಲಿ 'ಕೈ' ಪ್ರಚಾರಕ್ಕೆ ಜಮೀರ್ ನಿರಾಕರಣೆ!

​ದಾವಣಗೆರೆ: ಉಪಚುನಾವಣೆಯ ಕಣ ರಂಗೇರುತ್ತಿದ್ದರೂ ಸಚಿವ ಜಮೀರ್ ಅಹ್ಮದ್ ಖಾನ್ ಮಾತ್ರ ಪ್ರಚಾರ ಕಾರ್ಯದಿಂದ ದೂರ ಉಳಿಯುವ ನಿರ್ಧಾರ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು ಎಷ್ಟೇ ಒತ್ತಾಯ ಮಾಡಿದರೂ ಜಮೀರ್ ಅಹ್ಮದ್ ಅವರು ಪ್ರಚಾರಕ್ಕೆ ಒಪ್ಪಿಗೆ ನೀಡದೆ ಅಲ್ಲಿಂದ ನಿರ್ಗಮಿಸಿದ್ದಾರೆ ಎಂದು ತಿಳಿದುಬಂದಿದೆ.

​ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಪ್ರಚಾರ ನಡೆಸಲು ಸಚಿವರಿಗೆ ಮನವಿ ಮಾಡಲಾಗಿತ್ತು. ಹಿರಿಯ ನಾಯಕ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಸಮ್ಮುಖದಲ್ಲೇ ಈ ಬೆಳವಣಿಗೆ ನಡೆದಿದ್ದರೂ, ಜಮೀರ್ ಅವರು ತಮ್ಮ ನಿರ್ಧಾರವನ್ನು ಬದಲಿಸಿಲ್ಲ. ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರನ್ನು ಸೆಳೆಯಲು ಜಮೀರ್ ಅವರ ಉಪಸ್ಥಿತಿ ಮುಖ್ಯ ಎಂದು ಭಾವಿಸಲಾಗಿತ್ತು. ಆದರೆ, ಅಂತಿಮ ಕ್ಷಣದಲ್ಲಿ ಅವರು ಪ್ರಚಾರಕ್ಕೆ ಬಾರದೆ ತೆರಳಿರುವುದು ಈಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಮೂಲಕ ದಾವಣಗೆರೆ ಉಪಚುನಾವಣೆಯ ಅಖಾಡದಲ್ಲಿ ಕಾಂಗ್ರೆಸ್ ಒಳಗಿನ ಆಂತರಿಕ ಬೆಳವಣಿಗೆಗಳು ಹೊಸ ತಿರುವು ಪಡೆದುಕೊಂಡಿವೆ.

Edited By : Nagaraj Tulugeri
PublicNext

PublicNext

05/04/2026 09:33 pm

Cinque Terre

7.77 K

Cinque Terre

0