ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ: ಅಂಗಡಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ - ಆರೋಪಿಯ ಬಂಧನ, ಮದ್ಯ ವಶ

ಮೂಡಿಗೆರೆ: ಗೋಣಿಬೀಡು ಹೋಬಳಿಯ ಅಂಗಡಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪದ್ಮನಾಬ್ (65) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಠಾಣೆಯ ಪಿಎಸ್ಐ ಶ್ರೀನಾಥ್ ರೆಡ್ಡಿ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯು ತನ್ನ ಮನೆಯ ಪಕ್ಕದ ರಸ್ತೆಯಲ್ಲಿ ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಸ್ಥಳದಲ್ಲೇ ಕುಡಿಯಲು ವ್ಯವಸ್ಥೆ ಮಾಡಿಕೊಡುತ್ತಿದ್ದ ಎನ್ನಲಾಗಿದೆ.

​ದಾಳಿಯ ಸಂದರ್ಭದಲ್ಲಿ ಪೊಲೀಸರು ಪದ್ಮನಾಬ್‌ನನ್ನು ವಶಕ್ಕೆ ಪಡೆದಿದ್ದು, ಆತನಿಂದ 200 ರೂಪಾಯಿ ಮೌಲ್ಯದ ಸುಮಾರು 360 ಎಂಎಲ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಒರಿಜಿನಲ್ ಚಾಯ್ಸ್ ವಿಸ್ಕಿ ಕಂಪನಿಯ 90 ಎಂಎಲ್‌ನ 4 ಟೆಟ್ರಾ ಪ್ಯಾಕ್‌ಗಳು ಹಾಗೂ ಮದ್ಯ ಸೇವನೆಗೆ ಬಳಸುತ್ತಿದ್ದ ಪ್ಲಾಸ್ಟಿಕ್ ಲೋಟಗಳು ಸೇರಿವೆ. ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮತ್ತು ಸೇವನೆಗೆ ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

05/04/2026 09:35 pm

Cinque Terre

300

Cinque Terre

0

ಸಂಬಂಧಿತ ಸುದ್ದಿ