ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಒಪ್ಪಂದಕ್ಕೆ ಸೋಮವಾರ ಉತ್ತಮ ಅವಕಾಶ : ಇರಾನ್‌ಗೆ ಟ್ರಂಪ್‌ ಕೊನೆಯ ಎಚ್ಚರಿಕೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ , ಸೋಮವಾರ ಇರಾನ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳಲು ಉತ್ತಮ ಅವಕಾಶವಿದೆ ಎಂದು ಹೇಳಿದ್ದಾರೆ. "ನಾಳೆ ಒಳ್ಳೆಯ ಅವಕಾಶವಿದೆ ಎಂದು ನಾನು ಭಾವಿಸುತ್ತೇನೆ. ಸದ್ಯ ಮಾತುಕತೆ ನಡೆಯುತ್ತಿದೆ. ಆದರೆ, ಅವರು ಒಪ್ಪಂದ ಮಾಡಿಕೊಂಡು ಬೇಗ ನಿರ್ಧಾರ ತೆಗೆದುಕೊಳ್ಳದಿದ್ದರೆ, ನಾನು ಎಲ್ಲವನ್ನೂ ಗಾಳಿಗೆ ತೂರಿ ತೈಲವನ್ನು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದೇನೆ" ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಇರಾನ್ ತನ್ನ ಗಡುವನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದ್ದ ಡೊನಾಲ್ಡ್ ಟ್ರಂಪ್, ಈ ಹಿಂದೆ ಕಟುವಾಗಿ ಗುಡುಗಿದ್ದರು. ಅತ್ಯಂತ ಕಠಿಣ ಪದಗಳನ್ನು ಬಳಸಿ ಇರಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಅವರು, ಹಾರ್ಮುಜ್ ಜಲಸಂಧಿಯನ್ನು ತೆರೆಯುವಂತೆ ಅಥವಾ ಇರಾನ್‌ಗೆ "ನರಕ ದರ್ಶನ" ಆಗುತ್ತದೆ ಎಂದು ಎಚ್ಚರಿಸಿದ್ದರು.

ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಯುದ್ಧ ಸಾರಿದ್ದವು. ಈ ಯುದ್ಧದಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹತ್ಯೆಯಾದರು. ಇದಕ್ಕೆ ಪ್ರತೀಕಾರವಾಗಿ, ಇರಾನ್ ಇಸ್ರೇಲ್ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ತೀವ್ರ ದಾಳಿಗಳನ್ನು ನಡೆಸುತ್ತಿದೆ. ಯುದ್ಧ ಆರಂಭವಾಗಿ 35ಕ್ಕೂ ಹೆಚ್ಚು ದಿನಗಳು ಕಳೆದಿದ್ದರೂ, ಅದು ನಿಲ್ಲುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ.

Edited By :
PublicNext

PublicNext

05/04/2026 09:53 pm

Cinque Terre

6.2 K

Cinque Terre

4