ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ: ನೆರಿಯ ರಬ್ಬರ್ ತೋಟದಲ್ಲಿ ಕಾಣಿಸಿಕೊಂಡ ಚಿರತೆ

ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮದ ಅಲವೂರು ಬಾಬಿ ಎಂಬವರ ರಬ್ಬರ್ ತೋಟದಲ್ಲಿ ಬೆಳಗ್ಗಿನ ಜಾವ ಚಿರತೆ ‌ಕಾಣಿಸಿಕೊಂಡಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ರವಿವಾರ ಬೆಳಗ್ಗೆ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ನಡೆಸುತ್ತಿದ್ದ ಕಾರ್ಮಿಕರು ಚಿರತೆ ನೋಡಿ ಭಯಭೀತರಾಗಿದ್ದಾರೆ. ಅಲ್ಲದೆ ಚಿರತೆಯ ಫೋಟೊವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಚಿರತೆ ಕಾಟ ಇದ್ದು, ಕೆಲ ದಿನಗಳಿಂದ ಕಡಿಮೆಯಾಗಿತ್ತು. ಇದೀಗ ಮತ್ತೆ ಚಿರತೆ ಓಡಾಟ ಜನರಿಗೆ ಆತಂಕಕ್ಕೆ ಕಾರಣವಾಗಿದೆ.

Edited By :
Kshetra Samachara

Kshetra Samachara

05/04/2026 10:23 pm

Cinque Terre

598

Cinque Terre

0

ಸಂಬಂಧಿತ ಸುದ್ದಿ