ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ IPL 2026 ಸರಣಿಯ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ 44 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ಎದುರಾಳಿ ಸಿಎಸ್‌ಕೆ ತಂಡಕ್ಕೆ 251 ರನ್‌ಗಳ ಬೃಹತ್ ಗುರಿಯನ್ನು ನೀಡಿ ಭರ್ಜರಿ ಪ್ರದರ್ಶನ ನೀಡಿತ್ತು.
ಆರ್‌ಸಿಬಿ ನೀಡಿದ ಸವಾಲಿನ 251 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 207 ರನ್‌ಗಳಿಗೆ ಆಲ್‌ಔಟ್ ಆಗುವ ಮೂಲಕ ಹೀನಾಯ ಸೋಲಿಗೆ ಶರಣಾಯಿತು. ಈ ಮೂಲಕ ಆರ್‌ಸಿಬಿ ಪ್ರಸಕ್ತ ಐಪಿಎಲ್ ಸರಣಿಯಲ್ಲಿ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ.
PublicNext
05/04/2026 11:19 pm
LOADING...