ಪಲಾಸ (ಶ್ರೀಕಾಕುಳಂ): ಅತಿ ವೇಗವಾಗಿ ಬಂದ ಇನ್ನೋವಾ ಕಾರೊಂದು ಮಳೆಯ ಅಬ್ಬರಕ್ಕೆ ನಿಯಂತ್ರಣ ತಪ್ಪಿ, ಡಿವೈಡರ್ ದಾಟಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಭೀಕರ ಘಟನೆ ಶ್ರೀಕಾಕುಳಂ ಜಿಲ್ಲೆಯ ಪಲಾಸ ಸಮೀಪದ ನೇಮಲಿ ನಾರಾಯಣ ಪುರಂನಲ್ಲಿ ನಡೆದಿದೆ.
ಭಾನುವಾರ ಸಂಜೆ ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿತ್ತು. ಹೈವೇಯಲ್ಲಿ ಅತಿ ವೇಗವಾಗಿ ಸಾಗುತ್ತಿದ್ದ ಇನ್ನೋವಾ ಕಾರು, ಮಳೆ ನೀರಿನ ಕಾರಣಕ್ಕೆ ರಸ್ತೆಯ ಮೇಲೆ ದಿಢೀರ್ ಸ್ಕಿಡ್ ಆಗಿದೆ. ನಿಯಂತ್ರಣ ಕಳೆದುಕೊಂಡ ಕಾರು ನೇರವಾಗಿ ಡಿವೈಡರ್ ಹಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಬಲವಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಿಂದ ಪಕ್ಕಕ್ಕೆ ಎಸೆಯಲ್ಪಟ್ಟಿದೆ.
ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
PublicNext
07/04/2026 09:11 am
LOADING...