ಬೆಂಗಳೂರು: ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಸಂತಾಪ ಸೂಚಕ ಸಭೆ ನಡೆಸಿದ ಆರೋಪದ ಮೇಲೆ ಶಾಂತಿನಗರ ಶಾಸಕ ಎನ್.ಎ. ಹ್ಯಾರೀಸ್ ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.ಹೈಕೋರ್ಟ್ ಆದೇಶ ಉಲ್ಲಂಘಿಸಿ ಸಾರ್ವಜನಿಕ ಸಭೆ ನಡೆಸಿದ ಹಿನ್ನೆಲೆಯಲ್ಲಿ ಈ ನೋಟಿಸ್ ಜಾರಿಯಾಗಿದೆ.
ಇರಾನ್‌ನ ನಾಯಕ ಅಯತೊಲ್ಲಾ ಅಲಿ ಖಮೇನಿ ನಿಧನಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರೀಸ್ ಶಾಂತಿನಗರ ವ್ಯಾಪ್ತಿಯಲ್ಲಿ ಸಂತಾಪ ಸೂಚಕ ಸಭೆಯನ್ನು ಆಯೋಜಿಸಿದ್ದರು. ಈ ಸಭೆಯಲ್ಲಿ ನೂರಾರು ಜನರು ಭಾಗವಹಿಸಿದ್ದರು. ಆದರೆ, ಫ್ರೀಡಂ ಪಾರ್ಕ್ ಹೊರತುಪಡಿಸಿ, ಬೇರೆ ಯಾವುದೇ ಸ್ಥಳದಲ್ಲಿ ಪ್ರತಿಭಟನೆ, ಶಾಂತಿ ಸಭೆ ಅಥವಾ ಇನ್ನಿತರ ಸಾರ್ವಜನಿಕ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟ ಆದೇಶವಿದೆ. ಶಾಸಕ ಹ್ಯಾರೀಸ್ ಈ ಆದೇಶವನ್ನು ಉಲ್ಲಂಘಿಸಿ ಸಭೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಕುರಿತು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರೂ, ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಹಿಂದೂ ಮುಖಂಡ ತೇಜಸ್ ಗೌಡ ಗೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಸದ್ಯ, ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಶಾಸಕ ಎನ್.ಎ. ಹ್ಯಾರೀಸ್ ಗೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ಕ್ರಮಕ್ಕಾಗಿ ಕಾಯಲಾಗುತ್ತಿದೆ.
PublicNext
07/04/2026 11:03 am
LOADING...