ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದ್ವಿತೀಯ ಪಿಯುಸಿ ಫಲಿತಾಂಶ : ನಿರೀಕ್ಷೆಗೆ ತೆರೆ - ನಿರಾಸೆಗೊಂಡ ವಿದ್ಯಾರ್ಥಿಗಳಿಗೆ ಕೊನೆಗೂ ಸಿಕ್ಕಿತು ಸ್ಪಷ್ಟ ದಿನಾಂಕ!

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು (ಏಪ್ರಿಲ್ 7) ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಪ್ರಕಟಣೆಯನ್ನು ಮುಂದೂಡಲಾಗಿತ್ತು. ಇದರಿಂದ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಲಕ್ಷಾಂತರ ವಿದ್ಯಾರ್ಥಿಗಳು ನಿರಾಸೆಗೊಂಡಿದ್ದರು. ಇದೀಗ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಏಪ್ರಿಲ್ 9ರಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೆ ರಾಜ್ಯದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ 7,10,363ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಏಪ್ರಿಲ್ 7ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಈ ಹಿಂದೆ ಹೇಳಲಾಗುತ್ತಿತ್ತು. ಆದರೆ, ಅಧಿಕೃತ ಪ್ರಕಟಣೆ ಹೊರಬಾರದ ಕಾರಣ ಅನಿಶ್ಚಿತತೆ ಉಂಟಾಗಿ ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿತ್ತು. ಇದೀಗ ಫಲಿತಾಂಶ ಪ್ರಕಟವಾಗಲಿರುವ ದಿನಾಂಕದ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿದೆ. ಪ್ರಕಟವಾಗಲಿರುವ ಫಲಿತಾಂಶ ಆನ್‌ಲೈನ್‌ನಲ್ಲಿ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕ (Date of Birth) ನಮೂದಿಸುವ ಮೂಲಕ ಅಂಕಗಳನ್ನು ಪರಿಶೀಲಿಸಬಹುದಾಗಿದೆ.

Edited By :
PublicNext

PublicNext

07/04/2026 12:54 pm

Cinque Terre

10.64 K

Cinque Terre

0

ಸಂಬಂಧಿತ ಸುದ್ದಿ