ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ದ್ವಿಚಕ್ರ ವಾಹನ ಕಳವು ಪ್ರಕರಣದ ಆರೋಪಿಗಳ ದಸ್ತಗಿರಿ

ಬಂಟ್ವಾಳ: ವಸತಿಗೃಹದ ಶೆಡ್‌ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ‌ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಹಸನ್ ಬಾವ (55) ಹಾಗೂ ಬಂಟ್ವಾಳ ಬಿ ಮೂಡಾ ನಿವಾಸಿ ಮೊಹಮ್ಮದ್ ಇರ್ಷಾದ್ (37) ಬಂಧಿತ ಆರೋಪಿಗಳು.

ಮಾ.21ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿ ವಸತಿಗೃಹದ ಶೆಡ್‌ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿತ್ತು. ಈ ಬಗ್ಗೆ, ಅ.ಕ್ರ :37/2026, ಕಲಂ:303(2) BNS 2023ರಂತೆ ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಬಂಟ್ವಾಳ ಹಸನ್ ಬಾವ ಹಾಗೂ ಮೊಹಮ್ಮದ್ ಇರ್ಷಾದ್ (37) ಎಂಬವರನ್ನು ದಸ್ತಗಿರಿ ಮಾಡಿದ್ದಾರೆ. ಅಲ್ಲದೆ ಆರೋಪಿಗಳು ಕಳವು ಮಾಡಿದ್ದ 50,000ರೂ. ಮೌಲ್ಯದ ಸ್ಕೂಟರ್ ಅನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

07/04/2026 02:29 pm

Cinque Terre

1.44 K

Cinque Terre

0

ಸಂಬಂಧಿತ ಸುದ್ದಿ