ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಮಸೀದಿಯ ಕಾಣಿಕೆ ಡಬ್ಬಿ ಕಳವುಗೈದ ಅಂತಾರಾಜ್ಯ ಕಳ್ಳ ಅರೆಸ್ಟ್ !

ಸುಳ್ಯ : ಇಲ್ಲಿನ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವುಗೈದ ಆರೋಪಿಯನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ನಿವಾಸಿ ಮಹಮ್ಮದ್‌ ಸಲ್ಮಾನ್‌ (35) ಬಂಧಿತ ಆರೋಪಿ.

ಮಾ.30ರಂದು ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಠಾಣೆಯಲ್ಲಿ ಅ.ಕ್ರ 45/2026 ಕಲಂ 303(2)BNS -2023 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು.

ಇದೀಗ ಪೊಲೀಸರು ಎ.6ರಂದು ಸುಳ್ಯ ಕೆಮ್ರಾಜೆ ಎಲಿಮಲೆ ಎಂಬಲ್ಲಿ ಪ್ರಕರಣದ ಆರೋಪಿ ಆರೋಪಿ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ನಿವಾಸಿ ಮಹಮ್ಮದ್‌ ಸಲ್ಮಾನ್‌ ಎಂಬಾತನನ್ನು ದಸ್ತಗಿರಿ ಮಾಡಲಾಗಿರುತ್ತದೆ. ಆರೋಪಿಯಿಂದ ಕಳವು ಮಾಡಿದ 2000 ರೂ ನಗದು ಸ್ವಾಧೀನಪಡಿಸಿಕೊಂಡು ಮಾನ್ಯ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Edited By :
PublicNext

PublicNext

07/04/2026 02:55 pm

Cinque Terre

3.55 K

Cinque Terre

0

ಸಂಬಂಧಿತ ಸುದ್ದಿ