ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲ ಮುನ್ನೆಚ್ಚರಿಕಾ ಸಿದ್ಧತೆ ಕೈಗೊಳ್ಳಿ - ಡಾ: ರಾಜೇಂದ್ರ ಕೆ.ವಿ

ಬೆಂಗಳೂರು:ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ. ಅವರು ಇಂದು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂಬರುವ ಮಳೆಗಾಲದ ಮುನ್ನೆಚ್ಚರಿಕಾ ಸಿದ್ಧತೆಗಳು ಹಾಗೂ ಕಾಮಗಾರಿಗಳ ಪ್ರಗತಿ ಕುರಿತು ಕಾಮಗಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಆಯುಕ್ತರು ಮಳೆಗಾಲದ ಸಮಯದಲ್ಲಿ ಯಾವುದೇ ಲೋಪಗಳಿಲ್ಲದಂತೆ ವಿಭಾಗ ಮಟ್ಟದಲ್ಲಿ ಎಲ್ಲಾ ಅಭಿಯಂತರರು ಸಮರ್ಪಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿರುವ ನೀರು ನಿಲ್ಲುವ ಸ್ಥಳಗಳನ್ನು (Water Logging Points) ಮುಂಚಿತವಾಗಿ ಗುರುತಿಸಿ, ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ರಾಜಕಾಲುವೆ (SWD) ಹಾಗೂ ಶೋಲ್ಡರ್ ಡ್ರೇನ್ ಗಳ ಶುದ್ಧೀಕರಣ ಕಾರ್ಯಗಳನ್ನು ತುರ್ತುವಾಗಿ ಕೈಗೊಳ್ಳಬೇಕು. ಜೊತೆಗೆ ಡೆಬ್ರೀಸ್ ತೆರವುಗೊಳಿಸುವ ಕಾರ್ಯವನ್ನು ಸಮಗ್ರವಾಗಿ ನಡೆಸಲು ಸೂಚಿಸಿದರು.

ಸಹಾಯಕ ಕಾರ್ಯಪಾಲಕ ಅಭಿಯಂತರರ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿ, ತ್ವರಿತ ಸಂವಹನಕ್ಕಾಗಿ ವಾಟ್ಸಾಪ್ ಗುಂಪುಗಳನ್ನು ರಚಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸೂಚಿಸಿದರು.

ಸಭೆಯಲ್ಲಿ ಮುಖ್ಯ ಅಭಿಯಂತರರಾದ ಸ್ವಯಂಪ್ರಭ ಹಾಗೂ ಬಸವರಾಜ್ ಕಬಾಡೆ, ಅಧೀಕ್ಷಕ ಅಭಿಯಂತರರು ಹಾಗೂ ಎಲ್ಲಾ ವಿಭಾಗಗಳ ಕಾರ್ಯಪಾಲಕ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರು ಭಾಗಿಯಾಗಿದ್ದರು.

Edited By : Nagaraj Tulugeri
Kshetra Samachara

Kshetra Samachara

07/04/2026 03:07 pm

Cinque Terre

150

Cinque Terre

0

ಸಂಬಂಧಿತ ಸುದ್ದಿ