ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಪ್ರೀತಿಸಿ ಮದುವೆಯಾದ ಯುವತಿ ಆತ್ಮಹತ್ಯೆ ಪ್ರಕರಣ, ಪತಿ ವಶಕ್ಕೆ..!!

ಹುಬ್ಬಳ್ಳಿ : ಪ್ರೀತಿಸಿ ಮದುವೆಯಾದ ಯುವತಿ ಪತಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಪತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಮೊನ್ನೆ ರಾತ್ರಿ ಅಶ್ವಿನಿ (23) ಎಂಬ ಯುವತಿ ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು, ಮದುವೆಯಾಗಿದ್ದು ಐದು ವರ್ಷಗಳಾಗಿತ್ತು. ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದಂತೆಯೇ ವೈದ್ಯರು ‘ಬ್ರಾಟ್ ಡೆಡ್’ ಎಂದು ಘೋಷಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಮೃತಳ ಕುಟುಂಬಸ್ಥರು ಪತಿ ನಿಖಿಲ್ ವರದಕ್ಷಿಣೆಗಾಗಿ ನಿರಂತರ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿ ನಿಖಿಲ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ಮುಂದುವರಿದಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

07/04/2026 04:57 pm

Cinque Terre

23.99 K

Cinque Terre

1

ಸಂಬಂಧಿತ ಸುದ್ದಿ