ಹುಬ್ಬಳ್ಳಿ : ಹುಬ್ಬಳ್ಳಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಲಯ ಕಚೇರಿ-7ರ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸರ್ಕಾರಿ ಸಮಯಕ್ಕೆ ಬೆಳಿಗ್ಗೆ ಸರಿಯಾಗಿ ಬರುವುದಿಲ್ಲ ಎಂಬ ವಿಷಯಕ್ಕೆ ಕ್ರಮ ಕೈಗೊಳ್ಳುವ ಭರವಸೆ ಸಿಕ್ಕಿದೆ.
ಎಸ್...! ವೀಕ್ಷಕರೇ ಹುಬ್ಬಳ್ಳಿ ಮಹಾನಗರ ಪಾಲಿಕೆ ವ್ಯಾಪ್ತಿಯ ಜೋನಲ್-7 ರಲ್ಲಿ ನಿನ್ನೆ ಪಬ್ಲಿಕ್ ನೆಕ್ಸ್ಟ್ ಮಾಧ್ಯಮ ಸಾರ್ವಜನಿಕರ ದೂರಿನ ಮೇರೆಗೆ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದಾಗ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಯಕ್ಕೆ ಚಕ್ಕರ್ ಹಾಕುವ ದೃಶ್ಯಗಳು ಕಂಡು ಬಂದಿವೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ವಲಯ ಕಚೇರಿ-7 ಆಯುಕ್ತರಾದ ಆನಂದ ಕೆಸರಗೊಪ್ಪ ಏನಂದ್ರು ನೀವೇ ಕೇಳಿ.
ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿರುವ ವಲಯ ಆಯುಕ್ತರು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ, ಮತ್ತೆ ಅಧಿಕಾರಿಗಳು ಸಮಯ ತಪ್ಪಿದಲ್ಲಿ ಜನರಿಂದ ದೂರು ಬಂದಲ್ಲಿ ಪಬ್ಲಿಕ್ ನೆಕ್ಸ್ಟ್ ಮಾಧ್ಯಮ ಪುನಃ ಕಾರ್ಯ ಪ್ರವೃತ್ತವಾಗಲಿದೆ.
ಶ್ರೀಧರ ಪೂಜಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
07/04/2026 05:17 pm
LOADING...