ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕ್ಷೇತ್ರ ವಿಂಗಡಣೆಯಿಂದ ದಕ್ಷಿಣ ಭಾರತ ರಾಜ್ಯಗಳಿಗೆ ಆರ್ಥಿಕ ನಷ್ಟ - ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್‌

ಬೆಂಗಳೂರು: ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಮುಗ್ಗಟ್ಟನ್ನು ಎದುರಿಸಬೇಕಾಗುತ್ತದೆ. ನಮ್ಮ ತೆರಿಗೆಗಳು ಉತ್ತರ ರಾಜ್ಯಗಳಿಗೆ ಹಂಚಿಕೆಯಾಗಲಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್‌ ಹೇಳಿದರು.

ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು. ಲೋಕಸಭಾ, ವಿಧಾನಸಭಾ ಕ್ಷೇತ್ರ ಮರುವಿಂಗಡಣೆಯಿಂದ ಕ್ಷೇತ್ರಗಳು ನಷ್ಟವಾಗುವುದಿಲ್ಲ ಎನ್ನುವ ಪ್ರಧಾನಿಯವರ ಹೇಳಿಕೆಯ ಬಗ್ಗೆ ಕೇಳಿದಾಗ, ನಾನು ಈ ಬಗ್ಗೆ ಹಿಂದೆಯೇ ಹೇಳಿದ್ದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ. ದಕ್ಷಿಣದ ರಾಜ್ಯಗಳು ಎಚ್ಚೆತ್ತುಕೊಳ್ಳಬೇಕು. ಒಂದಲ್ಲ ಒಂದು ದಿನ ಈ ಕೂಗು ಎದ್ದೇಳಲಿದೆ ಎಂದಿದ್ದೇ. ಇಲ್ಲದಿದ್ದರೆ ಜನರು ಪರ್ಯಾಯವಾದ ಮಾರ್ಗಗಳನ್ನು ಆಲೋಚನೆ ಮಾಡುತ್ತಾರೆ ಎಂದು ಹೇಳಿದ್ದೆ. ಎಷ್ಟು ಸೀಟು ಹೋಗಲಿದೆ ಬರಲಿದೆ ಎನ್ನುವುದು ಮುಖ್ಯವಲ್ಲ ಎಂದರು.

ಇದೇ 16 ನೇ ತಾರೀಕಿನಿಂದ ವಿಶೇಷ ಲೋಕಸಭಾ ಅಧಿವೇಶನ ಕರೆಯಲಾಗಿದೆ. ಸರ್ಕಾರ ಯಾವ ರೀತಿಯಲ್ಲಿ ಬಿಲ್‌ ಮಂಡಿಸಲಿದೆ ಎಂದು ನೋಡಬೇಕಿದೆ. ಒಟ್ಟಾರೆ ದಕ್ಷಿಣದ ಹಣವನ್ನು ಉತ್ತರದ ರಾಜ್ಯಗಳಿಗೆ ತೆಗೆದುಕೊಂಡು ಹೋಗುವಂತಹ ಹುನ್ನಾರ ಇದಾಗಿದೆ ಎಂದು ಹೇಳಿದರು.

2011 ರ ಜನಗಣತಿಯ ಅನ್ವಯ ನಾವು ವಿಂಗಡಣೆ ಮಾಡುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಇದು ಇನ್ನೂ ಮಾರಕ. 2011 ರ ಜನಗಣತಿ ಪ್ರಕಾರ ಬೆಂಗಳೂರಿನ ಜನಸಂಖ್ಯೆ 60-70 ಲಕ್ಷ. ಈಗ 1.40 ಕೋಟಿ ಜನಸಂಖ್ಯೆಯಿದೆ. ಕರ್ನಾಟಕದ ಜನಸಂಖ್ಯೆ 5 ಕೋಟಿಯಿತ್ತು ಈಗ ಏಳು ಕೋಟಿಗೂ ಮೀರಿ ಜನಸಂಖ್ಯೆ ಬೆಳೆಯುತ್ತಿದೆ. ಇದರ ಜೊತೆಗೆ ಆರ್ಥಿಕ ಸವಾಲು ಸೇರಿದಂತೆ ಅನೇಕ ಸವಾಲುಗಳು ಎದುರಾಗುತ್ತವೆ. ಎಲ್ಲಾ ಪಕ್ಷಗಳು ಇದರ ಬಗ್ಗೆ ಚಿಂತನೆ ಮಾಡಬೇಕು ಎಂದು ತಿಳಿಸಿದರು.

Edited By :
PublicNext

PublicNext

07/04/2026 05:27 pm

Cinque Terre

3.51 K

Cinque Terre

0

ಸಂಬಂಧಿತ ಸುದ್ದಿ