ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬೀದಿ ಬದಿಯ ಅಂಗಡಿ ತೆರವು ವಿರೋಧಿಸಿ ಸಮತಾ ಸೇನೆ ಪಾಲಿಕೆ ಅಧಿಕಾರಿಗಳೊಂದಿಗೆ ವಾಗ್ವಾದ

ಧಾರವಾಡ : ಬೀದಿ ಬದಿಯ ವ್ಯಾಪಾರಿಗಳಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದೆ, ಮುನ್ಸೂಚನೆ ನೀಡದೆ ಏಕಾಏಕಿ ಬೀದಿ ಬದಿಯ ಅಂಗಡಿಗಳನ್ನು ತೆರವು ಮಾಡುವ ಕಾರ್ಯಾಚರಣೆ ನಡೆಸುತ್ತಿರುವ ಕ್ರಮ ಖಂಡಿಸಿ ಸಮತಾ ಸೇನೆಯ ಕಾರ್ಯಕರ್ತರು ಅಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದ ಘಟನೆ ಧಾರವಾಡದ ಸಿಟಿ ಬಸ್ ನಿಲ್ದಾಣದ ಬಳಿಯಲ್ಲಿ ನಡೆಯಿತು.

ಹೌದು... ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಸೋಮವಾರ ಬೀದಿ ಬದಿಯಲ್ಲಿ ವ್ಯಾಪಾರ ಮಾಡುವ ವ್ಯಾಪಾರಸ್ಥರ ಅಂಗಡಿ ಮುಂಗಟ್ಟುಗಳನ್ನು ತೆರವು ಮಾಡುವ ಸಂದರ್ಭದಲ್ಲಿ ಸಮತಾ ಸೇನೆ ಸದಸ್ಯರು ಬಡವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಹಾನಗರ ಪಾಲಿಕೆ ಮಾಡಬಾರದು. ರಸ್ತೆಯಲ್ಲಿನ ಅಂಗಡಿ ಮುಂಗಟ್ಟುಗಳನ್ನು ಪರ್ಯಾಯ ವ್ಯವಸ್ಥೆ ಕಲ್ಪಿಸಿದ ನಂತರ ತೆರವು ಮಾಡಬೇಕು. ತಕ್ಷಣ ತೆರವು ಕಾರ್ಯಾಚರಣೆ ನಿಲ್ಲಿಸಿ ಎಂದು ಪಾಲಿಕೆ ಅಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದರು.

ಧಾರವಾಡ ನಗರದ ಸಿಟಿ ಬಸ್ ನಿಲ್ದಾಣ, ಅಕ್ಕಿಪೇಟೆ, ನೆಹರು ಮಾರುಕಟ್ಟೆ, ತರಕಾರಿ ಮಾರುಕಟ್ಟೆ ಸೇರಿದಂತೆ ವಿವಿಧ ಕಡೆಗಳಲ್ಲಿ ರಸ್ತೆ ಆಜು ಬಾಜು ತಾತ್ಕಾಲಿಕ ಅಂಗಡಿ ಮುಂಗಟ್ಟುಗಳ ತೆರವು ಮಾಡಬಾರದು ಎಂದು ಸಮತಾ ಸೇನೆ ಸದಸ್ಯರು ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಮಾರುಕಟ್ಟೆಯಲ್ಲಿ ಸರಿಯಾದ ಮೂಲಭೂತ ಸೌಕರ್ಯ ಇಲ್ಲ, ಸರಿಯಾದ ನಿರ್ವಹಣೆ ಇಲ್ಲದೇ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಅಧಿಕಾರಿಗಳು ಗಮನ ಹರಿಸದೇ ಬೀದಿ ಬದಿಯ ವ್ಯಾಪಾರಿಗಳ ಅಂಗಡಿ ತೆರವು ಮಾಡುವುದು ಖಂಡನೀಯ ಎಂದು ಸಮತಾ ಸೇನೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ವರದಿ: ಮಂಜುನಾಥ ಕವಳಿ ಪಬ್ಲಿಕ್ ನೆಕ್ಸ್ಟ್ ಧಾರವಾಡ.

Edited By : Vinayak Patil
Kshetra Samachara

Kshetra Samachara

07/04/2026 07:08 pm

Cinque Terre

8.16 K

Cinque Terre

1

ಸಂಬಂಧಿತ ಸುದ್ದಿ