ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಫರ್ ಜೋನ್ ವ್ಯಾಪ್ತಿಯಲ್ಲಿ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ವೇಗಗೊಳಿಸಿ - ಡಿ.ಎಸ್. ರಮೇಶ್

ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿವಾರಣೆ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ರಾಜಕಾಲುವೆ ಬಫರ್ ಜೋನ್ ವ್ಯಾಪ್ತಿಯಲ್ಲಿ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯನ್ನು ವೇಗಗೊಳಿಸುವ ಕುರಿತು, ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್ ಅವರು ಬಿ-ಸ್ಮೈಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಯೋಜನೆಯ ಪ್ರಗತಿ ಪರಿಶೀಲಿಸಿದ ಆಯುಕ್ತರು, ಭೂಸ್ವಾಧೀನ ಹಾಗೂ ತಾಂತ್ರಿಕ ಪ್ರಕ್ರಿಯೆಗಳನ್ನು ನಿಗದಿತ ಗಡುವಿನೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಫರ್ ವಲಯದಲ್ಲಿನ ಸರ್ವಿಸ್ ರಸ್ತೆ ಹಾಗೂ ಸಂಬಂಧಿತ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವರವಾದ ಯೋಜನಾ ವರದಿ ಸಲ್ಲಿಸಲು ಸೂಚಿಸಲಾಯಿತು. ಕೆಲವು ಪ್ರದೇಶಗಳಲ್ಲಿ 10ಕ್ಕೂ ಹೆಚ್ಚು ಅಂತಸ್ತಿನ ಎತ್ತರದ ಕಟ್ಟಡಗಳು ರಸ್ತೆ ಮಾರ್ಗಕ್ಕೆ ಸಮೀಪದಲ್ಲಿರುವ ಸಾಧ್ಯತೆ ಇರುವುದರಿಂದ, ಪ್ರಮುಖ ಪ್ರದೇಶಗಳಲ್ಲಿ ನಕ್ಷೆ ಹಾಗೂ ಭೌತಿಕವಾಗಿ ಸ್ಥಳ ಪರಿಶೀಲನೆ ನಡೆಸಿ ದಾಖಲೆ ಮತ್ತು ವಾಸ್ತವ ಸ್ಥಿತಿಯ ನಡುವಿನ ವ್ಯತ್ಯಾಸ ಪರಿಶೀಲಿಸಲು ಸೂಚಿಸಲಾಯಿತು.

ಕಂದಾಯ ದಾಖಲೆಗಳು, ಅಲೈನ್ಮೆಂಟ್, ಸೂಪರ್ ಇಂಪೋಸ್ಡ್ ನಕ್ಷೆ ಹಾಗೂ ಸಿಡಿಪಿ (CDP) ನಕ್ಷೆಗಳ ಆಧಾರದ ಮೇಲೆ ಭೂಸ್ವಾಧೀನವನ್ನು ಅಂತಿಮಗೊಳಿಸಲು ಸೂಚಿಸಲಾಯಿತು.,ರಸ್ತೆ ಅಭಿವೃದ್ಧಿಗೆ ಅಗತ್ಯವಿರುವ ಭೂಸ್ವಾಧೀನಕ್ಕೆ ಒಳಪಡುವ ಖಾಸಗಿ ಸ್ವತ್ತುಗಳನ್ನು ನಿಖರವಾಗಿ ಗುರುತಿಸಲು ಸೂಚಿಸಲಾಯಿತು. ಭೂಸ್ವಾಧೀನಕ್ಕೆ ಒಳಪಡುವ ಭೂಮಿಯ ಮಾಲೀಕರಿಗೆ ಟಿ.ಡಿ.ಆರ್ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಅಲೈನ್ಮೆಂಟ್ ಮತ್ತು ನಕ್ಷೆಗಳ ಅಂತಿಮ ದೃಢೀಕರಣದ ನಂತರ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲು ಕರಡು ಅಧಿಸೂಚನೆ ಪ್ರತಿಯನ್ನು ಸಿದ್ಧಪಡಿಸಿ ಸಲ್ಲಿಸಲು ಸೂಚಿಸಲಾಯಿತು.

ಬಫರ್ ಜೋನ್ ಪ್ರದೇಶವನ್ನು ಪಾರ್ಕ್ ಮತ್ತು ಮುಕ್ತ ಸ್ಥಳ ಎಂದು ಪರಿಗಣಿಸಲಾಗುತ್ತದೆ. ನಿಯಮಗಳ ಪ್ರಕಾರ ಅಭಿವೃದ್ಧಿದಾರರು 15% ಜಾಗವನ್ನು ಮುಕ್ತ ಸ್ಥಳವಾಗಿ ಬಿಡಬೇಕು, ಬಫರ್ ಅಂಚಿನಿಂದ ಕಡ್ಡಾಯ ಸೆಟ್ಬ್ಯಾಕ್ ಪಾಲನೆ ಮಾಡಬೇಕು. ಈ ನಿಯಮಗಳ ಕಟ್ಟುನಿಟ್ಟಿನ ಅನುಸರಣೆ ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

Edited By : Nagaraj Tulugeri
Kshetra Samachara

Kshetra Samachara

07/04/2026 07:18 pm

Cinque Terre

186

Cinque Terre

0

ಸಂಬಂಧಿತ ಸುದ್ದಿ