ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಪಾಲಿಕೆ. ನಗರದ ಸೌಂದರ್ಯದ ಬಗ್ಗೆ ಹಸಿರು ನ್ಯಾಯಾಧೀಕರಣ ಮಂಡಳಿ ಅದೆಷ್ಟೋ ಸೂಚನೆ ನೀಡಿದರೂ, ಪಾಲಿಕೆ ಮಾತ್ರ ತನ್ನ ಕಾರ್ಯವೈಖರಿ ಸುಧಾರಿಸಿಕೊಂಡಿರಲಿಲ್ಲ. ಸಾರ್ವಜನಿಕರ ಸಮಸ್ಯೆಯ ಬಗ್ಗೆ ಪಬ್ಲಿಕ್ ನೆಕ್ಸ್ಟ್ ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಈಗ ಎಚ್ಚೇತ್ತುಕೊಂಡಿದೆ.
ಹುಬ್ಬಳ್ಳಿಯ ದೇಶಪಾಂಡೆನಗರದ ಐಬಿ ರಸ್ತೆಯಲ್ಲಿ ಸುಮಾರು ಹದಿನೈದು ದಿನಗಳಿಂದ ಚರಂಡಿ ನೀರು ರಸ್ತೆಯ ತುಂಬಾ ಹರಿಯುತ್ತಿತ್ತು. ಅಲ್ಲದೆ ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿರುವುದರಿಂದ ದುರ್ವಾಸನೆಯಿಂದ ವ್ಯಾಪಾರ ವಹಿವಾಟು ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಇಲ್ಲಿನ ಸಮಸ್ಯೆ ಬಗ್ಗೆ ಅಂಗಡಿಕಾರರು ಆಕ್ರೋಶಗೊಂಡಿದ್ದರು. ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ವಿಸ್ತೃತ ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಎಚ್ಚೇತ್ತುಕೊಂಡ ಪಾಲಿಕೆ ಸಮಸ್ಯೆ ಬಗೆಹರಿಸಿದ್ದು, ಪಬ್ಲಿಕ್ ನೆಕ್ಸ್ಟ್ ಬಿಗ್ ಇಂಪ್ಯಾಕ್ಟ್ ಆಗಿದೆ. ಸುಮಾರು ದಿನಗಳಿಂದ ಅನುಭವಿಸಿದ ಕಷ್ಟಕ್ಕೆ ಮುಕ್ತಿ ಸಿಕ್ಕಿದ್ದು,ಜನರು ಪಬ್ಲಿಕ್ ನೆಕ್ಸ್ಟ್ ಗೆ ಧನ್ಯವಾದ ತಿಳಿಸಿದ್ದಾರೆ.
ಇನ್ನು ಪಾಲಿಕೆಯ ಕಂಟ್ರೋಲ್ ರೂಮ್ ಗೆ ದೂರು ನೀಡಿ, ನೀಡಿ ಇಲ್ಲಿನ ಜನರು ಬೇಸತ್ತು ಹೋಗಿದ್ದರು. ಚರಂಡಿ ನೀರು ಡ್ರೈನೇಜ್ ಸಮಸ್ಯೆಯಿಂದ ರಸ್ತೆ ಜಲಾವೃತವಾಗಿದ್ದು, ಈ ಬಗ್ಗೆ ಯಾರೊಬ್ಬರೂ ಕಾಳಜಿ ವಹಿಸದೇ ಇರುವುದು ನಿಜಕ್ಕೂ ವಿಪರ್ಯಾಸಕರ ಸಂಗತಿಯಾಗಿತ್ತು. ಆದರೆ ಈಗ ಸಮಸ್ಯೆ ಬಗೆಹರಿದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಇದು ಪಬ್ಲಿಕ್ ನೆಕ್ಸ್ಟ್ ಮಾಧ್ಯಮದ ಬಿಗ್ ಇಂಪ್ಯಾಕ್ಟ್ ಆಗಿದೆ.
ಕ್ಯಾಮೆರಾ ಪರ್ಸನ್ ಗಜಾನನ ಜೊತೆಗೆ ಮಲ್ಲೇಶ್ ಸೂರಣಗಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
07/04/2026 08:05 pm
LOADING...