ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ವಿಜೃಂಭಣೆಯಿಂದ ಆಚರಣೆ

ಕೋಲಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ನಗರದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.‌ ​ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರು ಅಂಬೇಡ್ಕರ್ ಅವರ ಜೀವನ ಸಂದೇಶ ಮತ್ತು ಆಧುನಿಕ ಭಾರತಕ್ಕೆ ಅವರ ಕೊಡುಗೆಯನ್ನು ಸ್ಮರಿಸಿದರು. ​ರಾಮಚಂದ್ರ ಗುಹಾ ಅವರ 'ಮೇಕರ್ಸ್ ಆಫ್ ಮಾಡರ್ನ್ ಇಂಡಿಯಾ' ಪುಸ್ತಕವನ್ನು ಉಲ್ಲೇಖಿಸಿದ ಅವರು , ಆಧುನಿಕ ಭಾರತದ ಚರಿತ್ರೆಯಲ್ಲಿ ಗಾಂಧೀಜಿ ಮತ್ತು ನೆಹರೂ ಅವರಷ್ಟೇ ಪ್ರಮುಖ ಸ್ಥಾನವನ್ನು ಅಂಬೇಡ್ಕರ್ ಹೊಂದಿದ್ದಾರೆ ಎಂದು ತಿಳಿಸಿದರು.‌ ಮಧ್ಯರಾತ್ರಿಯಲ್ಲೂ ದೀಪ ಹಚ್ಚಿ ಓದುತ್ತಿದ್ದ ಅಂಬೇಡ್ಕರ್ ಅವರ ಜ್ಞಾನದಾಹವನ್ನು ನೆನಪಿಸಿದ ಅವರು, "ನನ್ನ ಜನ ಇನ್ನು ಮಲಗಿದ್ದಾರೆ ಎಂಬ ಕಾರಣಕ್ಕೆ ನಾನು ಎಚ್ಚರವಾಗಿದ್ದೇನೆ" ಎಂದು ಅಂಬೇಡ್ಕರ್ ಹೇಳುತ್ತಿದ್ದ ಮಾತುಗಳನ್ನು ಉಲ್ಲೇಖಿಸಿದರು. ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆ ಎಂಬುದು ಒಂದು ಮಾನಸಿಕ ವೈಕಲ್ಯ. ಇದು ಸಂವಿಧಾನದಿಂದ ನಿರ್ಮೂಲನೆಯಾಗಿದ್ದರೂ, ಮನುಷ್ಯನ ಮನಸ್ಸಿನಿಂದ ಹೊರಹೋಗಬೇಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Edited By : PublicNext Desk
Kshetra Samachara

Kshetra Samachara

14/04/2026 06:03 pm

Cinque Terre

4.3 K

Cinque Terre

0