ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರಕ್ಕೆ ಇಬ್ಬರು ಸಚಿವರ ಭೇಟಿ!

ಕೋಲಾರ - ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿಗೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಭೇಟಿ ನೀಡಲಿದ್ದಾರೆ, ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ಕೆ.ಜಿ ಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗಿರುವ, ನೂತನ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡ ಉದ್ಘಾಟನೆ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಸತಿ ಶಾಲೆಯ ಗುದ್ದಲಿ ಪೂಜೆಯಲ್ಲಿ ಸಚಿವರು ಭಾಗಿಯಾಗಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಉದ್ಘಾಟನೆ ಹಾಗೂ 11.30 ಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಲಿದೆ, ಈಗಾಗಲೇ ಐದು ಕೋಟಿ ವೆಚ್ಚದಲ್ಲಿ ಐ.ಟಿ.ಐ ಕಾಲೇಜು ಕಟ್ಟಡ ನಿರ್ಮಾಣವಾಗಿದ್ದು, 32 ಕೋಟಿ ವೆಚ್ಚದ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್ ಗೆ ಗುದ್ದಲಿ ಪೂಜೆಯು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುವಂತೆ ಶಾಸಕ ಕೆ ವೈ ನಂಜೇಗೌಡ ಕರೆ ನೀಡಿದ್ದಾರೆ.

Edited By :
PublicNext

PublicNext

16/04/2026 08:51 am

Cinque Terre

14.34 K

Cinque Terre

0