ಕಾರವಾರ: ಕಾರವಾರದ ಮಾಲಾದೇವಿ ಮೈದಾನದಲ್ಲಿ ಆಯೋಜಿಸಿದ ಶೃಂಗೇರಿ ಶಾರದಾಪೀಠದ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಗುರುವಂದನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ಕಾರವಾರ ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರ ನೇತೃತ್ವದಲ್ಲಿ ಆಯೋಜನೆಗೊಂಡ ಗುರುವಂದನಾ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆದರು. ಧರ್ಮ ಪ್ರಚಾರಕ್ಕಾಗಿ ಶೃಂಗೇರಿ ಶಾರದಾ ಪೀಠದ 37ನೇ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಧರ್ಮ ವಿಜಯಯಾತ್ರೆ ಕೈಗೊಂಡಿದ್ದು, ಕಳೆದ ಮೂರು ದಿನಗಳಿಂದ ಕಾರವಾರದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾರೆ. ಧರ್ಮ ಪ್ರಚಾರಕ್ಕಾಗಿ ಆಗಮಿಸಿದ ಶ್ರೀಗಳಿಗೆ ಕಾರವಾರದ ಮಾಲಾದೇವಿ ಮೈದಾನದಲ್ಲಿ ಗುರುವಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
PublicNext
16/04/2026 09:56 pm
LOADING...