ಚಿತ್ರದುರ್ಗ : ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಸರ್ಕಲ್ ನಲ್ಲಿ ಮೂರ್ತಿ ಸುತ್ತಲೂ ಹಾಕಿದ್ದ ತಡೆಗೋಡೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ತಡೆಗೋಡೆ ಧ್ವಂಸವಾಗಿದ್ದು, ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಸಂಗೊಳ್ಳಿ ರಾಯಣ್ಣನ ಕಟ್ಟೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಈ ಕುರಿತು ಸ್ಥಳೀಯರು ನಗರಸಭೆ ಅಧಿಕಾರಿಗಳಿಗೆ ಮನವಿ ಕೊಟ್ಟರೂ ಸರಿಪಡಿಸದೇ ನಿರ್ಲಕ್ಷ ತೋರಿದ ಹಿನ್ನೆಲೆ, ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಈ ರೀತಿ ಅಪಘಾತ ಪದೇ ಪದೇ ನಡೆಯುತ್ತಿದ್ದು, ಕೂಡಲೇ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಗಿದ್ದು, ಇಲ್ಲವಾದ್ರೆ ಪ್ರತಿಭಟನೆಯ ಎಚ್ಚರಿಕೆಯನ್ನ ಸ್ಥಳೀಯರು ನೀಡಿದ್ದಾರೆ.
PublicNext
18/04/2026 11:47 am
LOADING...