ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಸಿಗಾಳಿ ಎಫೆಕ್ಟ್: ಚಾಮರಾಜನಗರದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಿಲ್ಲ!

ಚಾಮರಾಜನಗರ : ಜಿಲ್ಲೆಯಲ್ಲಿ ತೀವ್ರ ಬಿಸಿಗಾಳಿ (ಹೀಟ್ ವೇವ್) ಪರಿಸ್ಥಿತಿ ಮುಂದುವರಿದಿರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆ ಹಿತದೃಷ್ಟಿಯಿಂದ ತೀವ್ರ ಬಿಸಿಗಾಳಿಯ ಅವಧಿಯಲ್ಲಿ ಬ್ಲೇಝರ್, ಟೈ ಮತ್ತು ಇತರ ಭಾರವಾದ ಯೂನಿಫಾರ್ಮ್ ಧರಿಸುವುದನ್ನು ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಶ್ರೀರೂಪ ಆದೇಶ ಹೊರಡಿಸಿದ್ದಾರೆ.

ತೀವ್ರ ಬಿಸಿಗಾಳಿಯ ಅವಧಿಯಲ್ಲಿ ವಿದ್ಯಾರ್ಥಿಗಳು ಭಾರವಾದ ಯೂನಿಫಾರ್ಮ್‌ಗಳು, ಬ್ಲೇಝರ್‌ಗಳು ಮತ್ತು ಇತರ ಅಸೌಕರ್ಯಕರ ವಸ್ತ್ರಗಳನ್ನು ಧರಿಸುವುದು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಹಗುರ, ಸಡಿಲ, ಆರಾಮದಾಯಕ ಉಡುಪುಗಳನ್ನು ಶಿಕ್ಷಣ ಸಂಸ್ಥೆಯ ಶಿಸ್ತಿಗೆ ಅನುಗುಣವಾಗಿ ಧರಿಸಲು ಅನುಮತಿ ನೀಡಬೇಕು.

ಎಲ್ಲ ಶಿಕ್ಷಣ ಸಂಸ್ಥೆಗಳು ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ಕೊಠಡಿಗಳಲ್ಲಿ ಶುದ್ಧ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಮಾಡಬೇಕು. ಮಧ್ಯಾಹ್ನದ ತೀವ್ರ ಬಿಸಿ ವಾತಾವರಣದ ಸಮಯದಲ್ಲಿ ಹೊರಾಂಗಣ ಚಟುವಟಿಕೆಗಳನ್ನು ತಪ್ಪಿಸಬೇಕು. ಬಿಸಿಗಾಳಿಯಿಂದ ಉಂಟಾಗುವ ಅನಾರೋಗ್ಯಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು. ಈ ಆದೇಶವು ಮುಂದಿನ ಸೂಚನೆ ಬರುವವರೆಗೆ ಅಥವಾ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿ ಕಡಿಮೆಯಾಗುವವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Edited By : PublicNext Desk
PublicNext

PublicNext

18/04/2026 07:12 pm

Cinque Terre

3.22 K

Cinque Terre

0

ಸಂಬಂಧಿತ ಸುದ್ದಿ