ಕಲಬುರಗಿ: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಭಾಗವಾಗಿ, ಕಲಬುರಗಿಯಲ್ಲಿ 20 ಕೋಟಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (KKRTC) ನೂತನ ಕೇಂದ್ರ ಕಚೇರಿ ನಿರ್ಮಾಣಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಈ ಮಹತ್ವದ ನಿರ್ಧಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.
ಕಲ್ಯಾಣ ಕರ್ನಾಟಕದಲ್ಲಿ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಸಾರಿಗೆ ಸಿಬ್ಬಂದಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು 'ಗ್ಯಾರಂಟಿ ಸರ್ಕಾರ' ಬದ್ಧವಾಗಿದೆ ಎಂದು ಸಚಿವರು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಈ ಯೋಜನೆಯು ಪ್ರದೇಶದ ಸಂಪರ್ಕ ಮತ್ತು ಸಾರಿಗೆ ಮೂಲಸೌಕರ್ಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.
PublicNext
19/04/2026 01:10 pm
LOADING...