ಉಡುಪಿ: ಹಿರಿಯ ಪತ್ರಕರ್ತ ಗಣೇಶ್ ಪ್ರಭು(61) ಅಲ್ಪಕಾಲದ ಅಸೌಖ್ಯದಿಂದ ಎ.19ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಮಣಿಪಾಲದಿಂದ ಪ್ರಕಟಗೊಳ್ಳುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ, ದಿ ಹಿಂದು ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ 21 ವರ್ಷಗಳ ಕಾಲ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಬಳಿಕ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಯ ಹಿರಿಯ ಉಪಸಂಪಾದಕರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.ಅವರು ಪತ್ನಿ ,ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
Kshetra Samachara
19/04/2026 02:35 pm
LOADING...