ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ: "ಜನಪ್ರತಿನಿಧಿಗಳಿಗೆ ಬಸವಣ್ಣನವರ ತತ್ವ ಸಿದ್ಧಾಂತ ಬಹು ಮುಖ್ಯ"

ಶಿಡ್ಲಘಟ್ಟ: ಜಗಜ್ಯೋತಿ ಬಸವಣ್ಣನವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿಯಲ್ಲಿ ಶಾಸಕ ಬಿ.ಎನ್. ರವಿಕುಮಾರ್ ನೇತೃತ್ವದಲ್ಲಿ ಬಹಳ ಅರ್ಥ ಪೂರ್ಣವಾಗಿ ಅದ್ಧೂರಿಯಾಗಿ ಆಚರಿಸಲಾಯಿತು.

ನಗರದ ಬಸವೇಶ್ವರ ಸೇವಾ ಮತ್ತು ಅಭಿವೃದ್ಧಿ ಸಮಿತಿ, ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಬಸವಣ್ಣನವರ ತತ್ವ ಸಿದ್ಧಾಂತಗಳು ಪ್ರತಿಯೊಬ್ಬರಿಗೂ ಆದರ್ಶ. ಮುಖ್ಯವಾಗಿ ಜನಪ್ರತಿನಿಧಿಗಳು ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಇನ್ನೂ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿನಿ ಸಿಂಚನ ಸಿ.ಶೇಖರ್ ಪ್ರಧಾನ ಭಾಷಣಕಾರರಾಗಿ ಮಾತನಾಡಿ, ಬಸವಣ್ಣನವರ ಜೀವನ ಚರಿತ್ರೆಯನ್ನು ಸ್ಮರಿಸಿದರು. ಬಸವಣ್ಣನವರು ನಡೆದು ಬಂದ ಹಾದಿ ಹಾಗೂ ಅವರ ಸಾಧನೆಗಳನ್ನು ಕುರಿತು ತಿಳಿಸಿಕೊಟ್ಟರು.

-ಚಿಕ್ಕತೇಕಹಳ್ಳಿ ಡಿ.ಶಿವಕುಮಾರ್ ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ

Edited By : Vinayak Patil
Kshetra Samachara

Kshetra Samachara

20/04/2026 08:41 pm

Cinque Terre

1.08 K

Cinque Terre

0