ಹಾವೇರಿ: ಹಾವೇರಿ ಜಿಲ್ಲೆಯ ವಿವಿಧೆಡೆ ಸೋಮವಾರ ಸಂಜೆ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ರಾಣೆಬೆನ್ನೂರು ನಗರದಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತು.
ರಾಣಿಬೆನ್ನೂರು ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದವು. ನಗರದ ದುರ್ಗಾ ಸರ್ಕಲ್ ನಲ್ಲಿ ಮಳೆನೀರು ಚರಂಡಿ ತುಂಬಿ ರಸ್ತೆಗೆ ನುಗ್ಗಿದ ಪರಿಣಾಮ ಪಾದಚಾರಿಗಳು ಪರದಾಡಿದರು.
ಕೆಲಕಾಲ ವಾಹನ ಸವಾರರು ಪರದಾಟ ನಡೆಸಿದರು. ಮುಂಜಾಗೃತಾ ಕ್ರಮವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು.
PublicNext
21/04/2026 10:24 am
LOADING...