ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ: ಕಾರಿಗೆ ಬೆಂಕಿ - ವ್ಯಕ್ತಿ ಸಜೀವ ದಹನ

ಜಮಖಂಡಿ: ತಾಲ್ಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದ ಭೀಕರ ಘಟನೆಯಲ್ಲಿ, ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಅದರಲ್ಲಿದ್ದ ವ್ಯಕ್ತಿಯೊಬ್ಬರು ಸಜೀವ ದಹನವಾಗಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್, ಕೊಲೆಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತಪಟ್ಟವರನ್ನು ಕನ್ನೊಳ್ಳಿ ಗ್ರಾಮದ 32 ವರ್ಷದ ಸೋಮು ಪಡಸಲಗಿ ಎಂದು ಗುರುತಿಸಲಾಗಿದೆ. ಈ ಸಂಬಂಧ ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
PublicNext

PublicNext

21/04/2026 10:43 am

Cinque Terre

11.59 K

Cinque Terre

0