ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುಂಡ್ಲುಪೇಟೆ: ಕಪ್ಪು ಬಾವುಟ ಹಿಡಿದು ಪ್ರತಿಭಟನೆಗೆ ಮುಂದಾದ ರೈತರು ಪೊಲೀಸರ ವಶ

ಗುಂಡ್ಲುಪೇಟೆ : ಸಿಎಂ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುವುದಕ್ಕೂ ಮುಂಚೆಯೇ ಕಪ್ಪು ಬಾವುಟ ಪ್ರದರ್ಶನ ಮಾಡಲು ಮುಂದಾದ ರೈತರನ್ನ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ಪಟ್ಟಣದ ಕೋಡಹಳ್ಳಿ ಸರ್ಕಲ್ ನಿಂದ ಕಪ್ಪು ಬಾವುಟ ಪ್ರದರ್ಶಿಸಿ ಸರ್ಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರದ ಘೋಷಣೆಗಳನ್ನ ಕೂಗುತ್ತಾ ಮುಂದೆ ಸಾಗಿದ ರೈತ ಸಂಘ ಸದಸ್ಯರನ್ನ ವಶಕ್ಕೆ ಪಡೆದ ಪೊಲೀಸರು ತೆರಕಣಾಂಬಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಕಪ್ಪು ಬಾವುಟ ಪ್ರದರ್ಶನ ಮಾಡಿಯೇ ತೀರುತ್ತೇವೆ ಎಂದು ಶಪಥ ಮಾಡಿದ್ದ ರೈತರು ಸರ್ಕಾರದ ನಡೆ ವಿರುದ್ಧ ಅಸಮಾಧಾನಗೊಂಡಿದ್ದಾರೆ.

ಶಿವಕುಮಾರ್, ಪಬ್ಲಿಕ್ ನೆಕ್ಸ್ಟ್, ಗುಂಡ್ಲುಪೇಟೆ

Edited By : Somashekar
PublicNext

PublicNext

21/04/2026 12:59 pm

Cinque Terre

9.68 K

Cinque Terre

0

ಸಂಬಂಧಿತ ಸುದ್ದಿ