ಉಡುಪಿ: ಯುವಜನತೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ವಿಭಾಗವು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಗೆ ಮಾಹಿತಿ ನೀಡಿದ ಆಪದ್ಭಾಂಧವ ಈಶ್ವರ್ ಮಲ್ಪೆ ಅವರು , ಆಳ್ವಾಸ್ ಸಮಾಜಕಾರ್ಯ ವಿಭಾಗದ ಸಹಯೋಗದೊಂದಿಗೆ ಏಪ್ರಿಲ್ 25 ರಂದು ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಮಲ್ಪೆಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ಅದರ ಭಾಗವಾಗಿ ಮಲ್ಪೆ ಪೇಟೆಯಿಂದ ಸಾವಿರಾರು ವಿದ್ಯಾರ್ಥಿಗಳಿಂದ ಜಾಥಾ ನಡೆಯಲಿದೆ.ಜಾಗೃತಿ ಉಪನ್ಯಾಸದ ಜೊತೆಗೆ ವಿವಿಧ ಕಾರ್ಯಕ್ರಮಗಳು ಅಂದು ನಡೆಯಲಿವೆ.ಮುಖ್ಯವಾಗಿ ಯುವಜನರು ಮತ್ತು ವಿದ್ಯಾರ್ಥಿಗಳು ಮಾದಕ ವ್ಯಸನಗಳಿಂದ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.ಕೆಲವೊಮ್ಮೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಮಾದಕ ವ್ಯಸನಗಳು ಮಾತ್ರವಲ್ಲ , ಬೀಚ್ ಮತ್ತಿತರ ಕಡೆಗಳಲ್ಲೂ ಅನೇಕ ಯುವಜನರು ಬಲಿಯಾಗುತ್ತಿದ್ದಾರೆ.ಇದನ್ನು ಸಾಧ್ಯವಾದಷ್ಟೂ ತಡೆಗಟ್ಟುವ ಸಲುವಾಗಿ ಆಳ್ವಾಸ್ ಸಮಾಜಕಾರ್ಯ ವಿಭಾಗದ ಜೊತೆ ಕೈಜೋಡಿಸಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ.ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
PublicNext
21/04/2026 02:42 pm
LOADING...