ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಹೆತ್ತ ತಾಯಿ ಅಂತ್ಯಸಂಸ್ಕಾರಕ್ಕೆ ಬಾರದ ಮಕ್ಕಳು - ಸಮಾಜ ಸೇವಕರ ಮಾನವೀಯ ಕಾರ್ಯ

ಬೆಳಗಾವಿ: ಇಬ್ಬರು ಮಕ್ಕಳಿದ್ದರೂ ತಾಯಿ ಅಂತ್ಯಕ್ರಿಯೆ ನೆರವೇರಿಸಲು ಬಾರದ ಹಿನ್ನೆಲೆಯಲ್ಲಿ ಸಮಾಜಸೇವಕರು ತಾವೇ ಮುಂದೆ ನಿಂತು ಮೃತ ವೃದ್ಧೆಯ ಅಂತ್ಯಕ್ರಿಯೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇನ್ನು ತಾಯಿ ಅಂತಿಮ‌ ದರ್ಶನ ಪಡೆಯಲು ಬಾರದ ಆ ಪಾಪಿ ಮಕ್ಕಳ ವಿರುದ್ಧ ಸ್ಥಳೀಯರು ಹಿಡಿಶಾಪ ಹಾಕಿರುವ ಈ ಘಟನೆ ನಡೆದಿದೆ.

ಮೂಲತಃ ಬೆಳಗಾವಿ ತಾಲೂಕಿನ ಮಾರಿಹಾಳ ಗ್ರಾಮದ ಅಂಜನಾ ಧಾಮೊನೆ ಎಂಬ ವೃದ್ಧೆ ಶಾಹುನಗರದ ವೃದ್ಧಾಶ್ರಮದಲ್ಲಿ ವಾಸವಿದ್ದರು. ವಯೋಸಹಜ ಕಾಯಿಲೆಯಿಂದ ಅವರು ನಿಧನರಾಗಿದ್ದರು. ಇಬ್ಬರು ಮಕ್ಕಳಿದ್ದರೂ ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸಿದ್ದ ಪಾಪಿ ಮಕ್ಕಳು ಆಗ ವೃದ್ಧಾಶ್ರಮದವರು ನಿಮ್ಮ ತಾಯಿ ಮೃತಪಟ್ಟಿದ್ದಾರೆ ಅಂತಾ ಅವರ ಇಬ್ಬರು ಮಕ್ಕಳಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆದರೂ, ಆ ಮಕ್ಕಳು ನೀವೇ ಅಂತ್ಯಕ್ರಿಯೆ ಮಾಡುವಂತೆ ಕಾಲ್ ಕಟ್ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಏನು ಮಾಡಬೇಕು ಅಂತಾ ಯೋಚಿಸುತ್ತಿದ್ದ ವೃದ್ಧಾಶ್ರಮದವರು ತಕ್ಷಣ ನಗರಸೇವಕ ಶಂಕರ ಪಾಟೀಲ ಮತ್ತು ಸಮಾಜಸೇವಕ ಗಂಗಾಧರ ಪಾಟೀಲ ಅವರಿಗೆ ವಿಷಯ ತಿಳಿಸಿದ್ದಾರೆ.

ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಈ ಇಬ್ಬರು, ಮೃತ ಅಜ್ಜಿಯ ಅಂತ್ಯಕ್ರಿಯೆಯನ್ನು ವಿಧಿ ವಿಧಾನಗಳ ಮೂಲಕ ತಾವೇ ನೆರವೇರಿಸಿದ್ದಾರೆ. ಇವರಿಗೆ ನಿಖಿಲ್ ಅಪ್ಪುಗೋಳ, ಸ್ಮಶಾನ ಭೂಮಿ ಸಿಬ್ಬಂದಿ ನಿಸ್ಸಾರ ಅವರು ಸಾಥ್ ನೀಡಿದರು. ಒಂದು ಕಡೆ ಇಂಥ ಪಾಪಿ ಮಕ್ಕಳು ಈ ಭೂಮಿ ಮೇಲೆ ಇದ್ದಾರಾ ಎಂಬ ಪ್ರಶ್ನೆ ಮೂಡಿದರೆ, ಮತ್ತೊಂದೆಡೆ ಹೀಗೆ ತಮಗೆ ಸಂಬಂಧವೇ ಇಲ್ಲದವರ ಅಂತ್ಯಕ್ರಿಯೆ ಮಾಡುವವ ಅಂತಃಕರಣ ಇರುವವರು ನಮ್ಮ ಜೊತೆಗಿದ್ದಾರೆ ಎಂಬ ಸಂದೇಶವನ್ನು ಈ ಘಟನೆ ನೀಡಿದೆ. ತಾನೇ ಜನ್ಮ ಕೊಟ್ಟ ಮಕ್ಕಳು ಅಂತ್ಯಕ್ರಿಯೆಗೆ ಬರಲಿಲ್ಲ. ಆದರೆ, ಈ ಮಕ್ಕಳು ಅಂತ್ಯಕ್ರಿಯೆ ಮಾಡಿದ್ದಾರೆ ಎಂದು ಸ್ಥಳೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Edited By : Vinayak Patil
PublicNext

PublicNext

21/04/2026 04:10 pm

Cinque Terre

12.26 K

Cinque Terre

0