ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಮೃತ್ಯುಕೂಪವಾದ ಸೇತುವೆ, ಅನಾಹುತಕ್ಕೂ ಮುನ್ನ ಶಾಶ್ವತ ಪರಿಹಾರಕ್ಕೆ ಆಗ್ರಹ!

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಗುಳಿ ಹಾಗೂ ದೊಡ್ಡಮಲ್ಲೆ ಗ್ರಾಮಗಳ ನಡುವಿನ ಪ್ರಮುಖ ಸೇತುವೆಯು ಸಂಪೂರ್ಣ ಶಿಥಿಲಗೊಂಡಿದೆ. ಇದರಿಂದಾಗಿ ಪ್ರತಿನಿತ್ಯ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಜೀವಭಯದಲ್ಲೇ ಪ್ರಯಾಣಿಸುವಂತಾಗಿದೆ. ಸೇತುವೆಯ ಕಳಪೆ ಸ್ಥಿತಿ ಯಾವುದೇ ಕ್ಷಣದಲ್ಲಿ ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಮನೆ ಮಾಡಿದೆ.

ಅಧಿಕಾರಿಗಳ ನಿರ್ಲಕ್ಷ್ಯ, ಶಾಶ್ವತ ಸೇತುವೆಗೆ ಆಗ್ರಹ

ಈ ಸೇತುವೆಯ ದುರಸ್ತಿ ಕುರಿತು ಲೋಕೋಪಯೋಗಿ ಇಲಾಖೆಯ ಗಮನಕ್ಕೆ ಹಲವು ಬಾರಿ ತಂದಿದ್ದರೂ, ಅಧಿಕಾರಿಗಳು ಕೇವಲ ಭಾರವಾದ ವಾಹನಗಳ ಸಂಚಾರ ನಿಷೇಧಿಸಿ ಫಲಕ ಹಾಕಿ ಜಾಣ ನಿದ್ರೆಗೆ ಜಾರಿದ್ದಾರೆ. ಪ್ರತಿದಿನ ಈ ರಸ್ತೆಯಲ್ಲಿ ಸುಮಾರು 10 ಶಾಲಾ ಬಸ್‌ಗಳು ಸಂಚರಿಸುತ್ತಿದ್ದು, ನೂರಾರು ವಿದ್ಯಾರ್ಥಿಗಳ ಭವಿಷ್ಯ ಅಪಾಯದಲ್ಲಿದೆ. ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಈ ಸ್ಥಳದಲ್ಲಿ ಶಾಶ್ವತವಾಗಿ ನೂತನ ಸೇತುವೆಯನ್ನು ನಿರ್ಮಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Edited By : Vijay Kumar
PublicNext

PublicNext

22/04/2026 08:35 am

Cinque Terre

6.78 K

Cinque Terre

0

ಸಂಬಂಧಿತ ಸುದ್ದಿ